

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.
ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ವ್ಯಕ್ತಿ ಅವಿವಾಹಿತರಾಗಿದ್ದು, ಎಫ್‌ಎ 244 ಸಂಖ್ಯೆಯ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.
ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಅಲ್ಲದೆ, ಕುಟುಂಬ ಸದಸ್ಯರಿಗೆ ಕ್ಷಮೆಯಾಚಿಸಿದ್ದಾರೆ.
ಮಂಜುನಾಥ್ ಅವರ ಸಹೋದರಿ ಮತ್ತು ಸೋದರ ಮಾವನಿಗೆ ಸಾವಿನ ಬಗ್ಗೆ ತಿಳಿಸಲಾಗಿದೆ. ಸಾವಿನ ಹಿಂದಿನ ನಿಖರವಾದ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ. ಕೆಲಸದ ವಿಚಾರಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆಯೇ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement