

ಬೆಂಗಳೂರು: ಇಷ್ಟು ದಿನ ಮಳೆ..ಮಳೆ..ಅಂದಿದ್ದಾಯ್ತು. ಇದೀಗ ಚಳಿ..ಚಳಿ... ಎನ್ನುವಂತಾಗಿದೆ. ಚಳಿಗಾಲ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗಿದೆ.
ನಗರದಲ್ಲಿ ಶುಕ್ರವಾರ ಕನಿಷ್ಠ ತಾಪಮಾನ 16.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶನಿವಾರದವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಮತ್ತು 16 ಡಿಗ್ರಿ ಸೆಲ್ಸಿಯಸ್ ಮತ್ತು ನಗರದಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ದಿಟ್ವಾ ಚಂಡಮಾರುತ ಇರುವುದರಿಂದ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ.
ಮುಂದಿನ ವಾರ ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ಚಂಡಮಾರುತದ ಪ್ರಭಾವದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇನ್ನು ಉತ್ತರ ಜಿಲ್ಲೆಗಳಲ್ಲಿ ತಾಪಮಾನ ಕಡಿಮೆಯಾಗಿ ಚಳಿಯ ಪ್ರಭಾವ ಹೆಚ್ಚಾಗಲಿದೆ. ಇದರ ಜತೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ನಗರದ ವಿವಿಧ ಭಾಗಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಇಳಿಕೆ ಕಂಡಿದೆ.
Advertisement