

ಹಾವೇರಿ: ಬೆಳಗಾವಿಯಲ್ಲಿ ಕಳೆದ ತಿಂಗಳು ಕಬ್ಬು ಬೆಳೆಗಾರರ ಪ್ರತಿಭಟನೆಯ ತೀವ್ರವಾಗಿ ಕೊನೆಗೆ ಸಿಎಂ ಬೆಂಬಲ ಬೆಲೆ ಘೋಷಿಸಿದ್ದ ನಂತರ ತಣ್ಣಗಾಯಿತು. ಇದೀಗ ರಾಜ್ಯ ಸರ್ಕಾರಕ್ಕೆ ಮೆಕ್ಕೆಜೋಳ ಬೆಳೆಗಾರರ ಬಿಸಿ ತಟ್ಟಿದೆ. ಹಾವೇರಿ ಜಿಲ್ಲೆಯಲ್ಲಿ ಹೆಚ್ಚು ಮೆಕ್ಕೆಜೋಳ ಬೆಳೆಯುತ್ತಾರೆ. ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ರೈತರು ಕಳೆದ 5 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರೈತರ ಬೇಡಿಕೆಯೇನು?
ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ಸರ್ಕಾರ 2,400 ರೂಪಾಯಿ ಬೆಂಬಲ ಬೆಲೆ ಘೋಷಿಸಿ ಜಿಲ್ಲೆಯಲ್ಲಿ ಖರೀದಿ ಕೇಂದ್ರವನ್ನು ತೆರೆಯುಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸುತ್ತಿದ್ದಾರೆ. ರೈತರ ಹೋರಾಟಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಕೂಡ ಬೆಂಬಲ ಸೂಚಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಶೇಕಡಾ 80 ರಷ್ಟು ಮೆಕ್ಕೆಜೋಳ ಬೆಳೆಯಲಾಗಿದೆ. ಪ್ರತಿ ಎಕರೆಗೆ 20 ರಿಂದ 30 ಸಾವಿರ ಖರ್ಚು ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಪ್ರತೀ ಕ್ವಿಂಟಾಲ್ಗೆ 1700 ರಿಂದ 1800 ರೂಪಾಯಿ ನೀಡಲಾಗುತ್ತಿದೆ. ಕಡಿಮೆ ಬೆಲೆಗೆ ಮಾರಾಟ ಮಾಡಿ ಸಾಲದ ಸುಳಿಗೆ ಸಿಲುಕುವ ಪರಿಸ್ಥಿತಿ ಬಂದಿದೆ. ಹೀಗಾಗಿ ಸರ್ಕಾರ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳಕ್ಕೆ ಖರೀದಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ.
Advertisement