ರಾಜ್ಯ

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ MBA ವಿದ್ಯಾರ್ಥಿಗೆ ಚೂರಿ ಇರಿತ, ದರೋಡೆ

ಪೇಯಿಂಗ್ ಗೆಸ್ಟ್ (ಪಿಜಿ) ನಿಂದ ಮೆಟ್ರೋ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಸ್ಕೂಟರ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ತಡೆದು, ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.

ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ MBA ವಿದ್ಯಾರ್ಥಿಗೆ ಚೂರಿ ಇರಿತ, ದರೋಡೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಎಂಬಿಎ ವಿದ್ಯಾರ್ಥಿಗೆ ದುಷ್ಕರ್ಮಿಗಳ ಗುಂಪೊಂದು ಚೂರಿ ಇರಿದು ದರೋಡೆ ನಡೆಸಿರುವ ಘಟನೆ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.

ಸಂತ್ರಸ್ತ ಯುವಕನನ್ನು ನವೀನ್ ಜೆ ಜಿ (21) ಎಂದು ಗುರ್ತಿಸಲಾಗಿದೆ. ಘಟನೆ ಬುಧವಾರ ರಾತ್ರಿ 11.30 ರಿಂದ ರಾತ್ರಿ 11.55 ರ ಸುಮಾರಿಗೆ ನಡೆದಿದ್ದು, ಮರುದಿನ ದೂರು ದಾಖಲಾಗಿದೆ.

ಪೇಯಿಂಗ್ ಗೆಸ್ಟ್ (ಪಿಜಿ) ನಿಂದ ಮೆಟ್ರೋ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಸ್ಕೂಟರ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ತಡೆದು, ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ. ಯುವಕನ ಮೇಲೆ ಹರಿತವಾದ ಚಾಕುವಿನಿಂದ ಹಲ್ಲೆ ನಡೆಸಲಾಗಿದ್ದು, ಎಡ ಕೆನ್ನೆಗೆ 22 ಹೊಲಿಗೆಗಳನ್ನು ಹಾಕಲಾಗಿದೆ.

ದುಷ್ಕರ್ಮಿಗಳ ದಾಳಿಗೊಳಗಾದ ಯುವಕ ರಕ್ತದ ಮಡುವಿನಲ್ಲಿಯೂ ಪಿಜಿಗೆ ಓಡಿ ಹೋಗಿದ್ದು, ಸ್ನೇಹಿತರ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದುಷ್ಕರ್ಮಿಗಳು ಯುವಕನ ಬಳಿಯಿದ್ದ 5 ಲಕ್ಷ ರೂ. ಮೌಲ್ಯದ ಐಫೋನ್ ಕಸಿದು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.