ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.
CM Siddaramaiah, DK Shivakumar Casual Images
ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Updated on

ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ಹೇಳಿದ್ದ ವಿಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು, ಬಜೆಟ್ ಮಂಡಿಸಲು ಸಾಧ್ಯವಿಲ್ಲವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಕನಸಿಗೆ ಕೊಳ್ಳಿ ಇಟ್ಟರು.

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ಅವರ ವಿರೋಧಕ್ಕೆ ಛೀಮಾರಿಯಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ ಹೀಗಾಗಿ ಉತ್ತಮವಾಗಿ ದಸರಾ ಕಾರ್ಯಕ್ರಮಗಳು ನಡೆಯುತ್ತಿದೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವವಾಗಿದೆ, ದಸರಾ ಆಚರಣೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಆದರೂ ಎಲ್ಲವು ಉತ್ತಮವಾಗಿ ನಡೆದುಕೊಂಡು ಹೋಗುತ್ತಿದೆ.

CM Siddaramaiah, DK Shivakumar Casual Images
ಡಿ.ಕೆ ಶಿವಕುಮಾರ್ ಅವರು ನವೆಂಬರ್​​ನಲ್ಲಿ ಸಿಎಂ ಆಗಿಯೇ ಆಗುತ್ತಾರೆ, ನಮ್ಮ ಇಚ್ಛೆ ಕೂಡ ಅದೇ: ಎಲ್.ಆರ್ ಶಿವರಾಮೇಗೌಡ

ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com