Washing machine
ಆಯುಧ ಪೂಜೆ ಹಬ್ಬದಂದು ಹೊಸದಾಗಿ ಖರೀದಿಸಿದ ವಾಷಿಂಗ್ ಮಷಿನ್'ಗೆ ಪೂಜೆ ಸಲ್ಲಿಸುತ್ತಿರುವ ಮಹಿಳೆ.

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.
Published on

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ಮನೆಗೆ ಹೊಸ ವಾಷಿಂಗ್ ಮಷಿನ್ ಖರೀದಿಸಿದ್ದಾರೆ.

ಬೆಂಗಳೂರು ದಕ್ಷಿಣದ ರಾಮನಗರದಲ್ಲಿ ಗೃಹ ಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ವಾಷಿಂಗ್‌ ಮೆಷಿನ್ ಖರೀದಿಸಿದ್ದಾರೆ. ಫಲಾನುಭವಿ ವಾಷಿಂಗ್ ಮೆಷಿನ್ ಖರೀದಿಸಿ, ಆಯುಧ ಪೂಜೆಯಂದು ಪೂಜೆ ಮಾಡಿದ್ದಾರೆ.

ಈ ಕುರಿತ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದು ಹೇಳಿದ್ದಾರೆ.

ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು.

ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆಂದು ತಿಳಿಸಿದ್ದಾರೆ.

Washing machine
ಉಡುಪಿಯೊಂದರಲ್ಲೇ 3.15 ಲಕ್ಷ ಜನರಿಗೆ ‘ಗೃಹ ಜ್ಯೋತಿ’ ಯೋಜನೆ ಪ್ರಯೋಜನವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com