
2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2025 ರಲ್ಲಿ ಪ್ರಕಟ ಆಗಿದ್ದು, ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ (777 Charlie) ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.
ಹೃದಯಶಿವ ನಿರ್ದೇಶನ ಮಾಡಿದ ‘ಬಿಸಿಲು ಕುದುರೆ’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ.
‘ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್ ಅವರು ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ತಿಯಾಜ್ ಸುಲ್ತಾನ್ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ಪಡೆದಿದ್ದಾರೆ.
‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದ್ದರೆ, ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ಒಲಿದಿದೆ.
Advertisement