
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ನಂತರ, ನಗರದ ಹೊರವಲಯದ ಕೆಲವು ಪ್ರದೇಶಗಳನ್ನು ಪರಿಗಣಿಸಿ ಇನ್ನೂ 140-150 ವಾರ್ಡ್‌ಗಳನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ನಂತರ ನಗರದ ಹೊರವಲಯದ ಕೆಲವು ಪ್ರದೇಶಗಳನ್ನು ಸೇರಿಸುವ ಮೂಲಕ ಪ್ರಾಧಿಕಾರದ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನ ಸಮಗ್ರ ಅಭಿವೃದ್ಧಿ ಮತ್ತು ಜನಸ್ನೇಹಿ ಆಡಳಿತವನ್ನು ದೃಷ್ಟಿಯಲ್ಲಿಟ್ಟುಕೊಂಡು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಗರವನ್ನು ಐದು ಪ್ರತ್ಯೇಕ ನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಈ ಮಹತ್ವದ ಪುನಾರಚನೆಯಲ್ಲಿ ಒಟ್ಟು 368 ವಾರ್ಡ್ಗಳನ್ನು ರಚಿಸಲಾಗಿದ್ದು, ಆಡಳಿತದ ವಿಕೇಂದ್ರೀಕರಣದ ಮೂಲಕ ನಾಗರಿಕರಿಗೆ ಉತ್ತಮ ಸೇವೆ ತಲುಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಅಕ್ಷೇಪಣೆಗಳಿದ್ದರೆ ಜನರು ಸಲ್ಲಿಸಬಹುದು. ಸರ್ಕಾರ್ ಸಮಸ್ಯೆಗಳನ್ನು ಸರಿಪಡಿಸಲು ಸಿದ್ಧವಿದೆ. ಸಂವಿಧಾನದ 74ನೇ ತಿದ್ದುಪಡಿಯ ಪ್ರಕಾರ, ಜನರಿಗೆ ಅಧಿಕಾರ ನೀಡಬೇಕು. ಚುನಾವಣೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಟೀಕೆ ಬರವಿ. ಅವುಗಳು ಹೋಗುತ್ತವೆ. ಆದರೆ, ಕೆಲಸ ಉಳಿಯುತ್ತದೆ. ನಾವು ಕೆಲಸ ಮಾಡುತ್ತೇವೆ ಮತ್ತು ಬೆಂಗಳೂರಿಗೆ ಹೊಸ ಮುಖವನ್ನು ನೀಡುತ್ತೇವೆ. ಸರ್ಕಾರ ನಗರಕ್ಕೆ ನೀಡಿರುವ ಕಾರ್ಯಕ್ರಮಗಳನ್ನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇವೆ ಎಂದು ಹೇಳಿದರು.
Advertisement