
ಮೈಸೂರು: ಮೈಸೂರಿನಲ್ಲಿ ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ. 'ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಹೊಸ ಮನೆಗೆ ಸ್ಥಳಾಂತರಗೊಂಡ ನಂತರವೂ, ಮರಿಸ್ವಾಮಿ ಅವರು ಈ ಮನೆಯನ್ನು ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಮನೆಯ ಗೃಹಪ್ರವೇಶ ನಡೆಯುವ ಸಾಧ್ಯತೆ ಇದೆ. ಮೈಸೂರಿಗೆ ಬಂದರೆ ತಾವು ಮರಿಸ್ವಾಮಿ ಎಂಬುವವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇದು ನನ್ನ ಅದೃಷ್ಟದ ಮನೆ. ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಅದೃಷ್ಟ ಒದಗಿ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Advertisement