
ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸದ ಯದುವೀರ್ ಒಡೆಯರ್,ಕನ್ನಡದ ಜನಮನ್ನಣೆಯ ಮೇರು ಸಾಹಿತಿˌಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್ˌ ಪದ್ಮಭೂಷಣ ಡಾ. ಎಸ್. ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಅವರನ್ನು ಗೌರವಿಸಲು, ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮತ್ತು ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಅವರ ಸ್ಮರಣಾರ್ಥ ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.
Advertisement