
ಬೆಂಗಳೂರು: ರಾಜ್ಯಾದ್ಯಂತ ಮಳೆ ಕಡಿಮೆಯಾಗಿಲ್ಲ. ರಾಜಧಾನಿ ಬೆಂಗಳೂರಿನಲ್ಲೂ ಕಳೆದ ರಾತ್ರಿ ಮಳೆಯಾಗಿದೆ. 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಯಲ್ಲಾಪುರ, ಕಾರವಾರ, ಆಗುಂಬೆ, ಮಂಗಳೂರು, ಕಮ್ಮರಡಿ, ಕೋಟಾ, ಮುಲ್ಕಿ, ಸಿದ್ದಾಪುರ, ಝಲ್ಕಿ, ಅಂಕೋಲಾ, ಬೆಳ್ತಂಗಡಿ, ಧರ್ಮಸ್ಥಳ, ಗೋಕರ್ಣ, ಹೊನ್ನಾವರ, ಕದ್ರಾ, ಕಾರ್ಕಳ, ಕೊಪ್ಪ, ಕುಮಟಾ, ಮಂಗಳೂರು, ಪುತ್ತೂರು, ಎನ್ಆರ್ಪುರ, ಶಕ್ತಿನಗರ, ಶೃಂಗೇರಿ, ತ್ಯಾಗರ್ತಿ, ಉಡುಪಿ, ಉಪ್ಪಿನಂಗಡಿ, ವಿಜಯಪುರ, ಬೆಂಗಳೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
Advertisement