
ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಐಎಂಎಸ್) ಆವರಣದಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟಿಸಿದರು. ಇದು ಕರ್ನಾಟಕದಾದ್ಯಂತ ಸುಧಾರಿತ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸುವ ಸರ್ಕಾರದ ಯೋಜನೆಯಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.
ಇಂದು ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಹಾಗೂ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ನಂತರ ಮಾತನಾಡಿದ ಸಿಎಂ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಪುನರುಚ್ಚರಿಸಿದರು.
"ರಾಜ್ಯದಲ್ಲಿ ಈಗಾಗಲೇ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಶೀಘ್ರದಲ್ಲೇ, ಉಳಿದ ಜಿಲ್ಲೆಗಳು ವೈದ್ಯಕೀಯ ಕಾಲೇಜುಗಳು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಡೆಯಲಿವೆ" ಎಂದು ಅವರು ಹೇಳಿದರು.
ಇದೇ ವೇಳೆ ಬಿಐಎಂಎಸ್‌ನಲ್ಲಿ ಉಚಿತ ಸೇವೆ ಒದಗಿಸಲು ಕೆಎಲ್‌ಇ ಆಸ್ಪತ್ರೆಯಿಂದ ವೈದ್ಯರನ್ನು ನಿಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿಗಳು ಕೆಎಲ್‌ಇ ಸೊಸೈಟಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಬಿಐಎಂಎಸ್ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಾಮಾಜಿಕ ನ್ಯಾಯಕ್ಕೆ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸಿದ ಸಿದ್ದರಾಮಯ್ಯ, "ಬಡವರು, ದೀನದಲಿತರು ಮತ್ತು ವಂಚಿತ ಸಮುದಾಯಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ" ಎಂದು ಹೇಳಿದರು.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇ.95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ.
ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಂಡ ನಂತರ ಒಣ ಬೆಳೆಗಳಿಗೆ ಹೆಕ್ಟೇರ್‌ಗೆ 17,000 ರೂ. ಮತ್ತು ನೀರಾವರಿ ಬೆಳೆಗಳಿಗೆ ಹೆಕ್ಟೇರ್‌ಗೆ 21,500 ರೂ. ಪರಿಹಾರ ವಿತರಿಸಲಾಗುವುದು ಎಂದು ಸಿಎಂ ತಿಳಿಸಿದರು.
Advertisement