‘ಐ ಲವ್ ಮೊಹಮ್ಮದ್’ ಘೋಷಣೆ: ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ

ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್‌ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ.
Situation in Belagavi
ಸ್ಥಳದಲ್ಲಿ ನಿನ್ನೆ ರಾತ್ರಿ ಕಂಡುಬಂದ ಸ್ಥಿತಿ
Updated on

ಬೆಳಗಾವಿ: ಬೆಳಗಾವಿಯ (Belagavi) ಖಡೇಬಜಾರ್‌ನ ಖಡಕ್‌ ಗಲ್ಲಿಯಲ್ಲಿ ನಿನ್ನೆ ಶುಕ್ರವಾರ ರಾತ್ರಿ ನಡೆದ ಉರುಸ್ ಮೆರವಣಿಗೆ ಹಿಂದೂ-ಮುಸ್ಲಿಮರ ನಡುವೆ ಜಟಾಪಟಿಗೆ ಕಾರಣವಾಗಿದೆ.

ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್‌ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ.

ಇದು ಸ್ಥಳೀಯ ಹಿಂದೂಗಳನ್ನು ಕೆರಳಿಸಿದ್ದು ಇದಕ್ಕೆ ಆಕ್ಷೇಪಿಸಿದ್ದಾರೆ. ಇದಾದ ಕೆಲಹೊತ್ತಿನಲ್ಲೇ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಲ್ವಾರ್ ಪ್ರದರ್ಶಿಸಿ ಗೂಂಡಾವರ್ತನೆ ತೋರಿದ ಆರೋಪ ಕೇಳಿಬಂದಿದೆ.

Situation in Belagavi
ದಾವಣಗೆರೆ: 'ಐ ಲವ್ ಮೊಹಮ್ಮದ್' ಪೋಸ್ಟರ್; ಕೋಮು ಉದ್ವಿಗ್ನತೆ, ಕಲ್ಲು ತೂರಾಟ! Video

ಅನುಮತಿ ಇಲ್ಲದೆ ಖಡಕ್ ಗಲ್ಲಿಯಲ್ಲಿ ಮೆರವಣಿಗೆ

ಪ್ರತಿ ವರ್ಷ ಜಾಲ್ಗಾರ ಗಲ್ಲಿ ಮತ್ತು ಶನಿವಾರಕೂಟ ಗಲ್ಲಿ ಮೂಲಕ ದರ್ಗಾಕ್ಕೆ ಉರುಸ್ ಮೆರವಣಿಗೆ ಹೋಗುತ್ತಿತ್ತು. ಆದರೆ, ಈ ಬಾರಿ ಪೊಲೀಸರ ಅನುಮತಿ ಇಲ್ಲದಿದ್ದರೂ ಮರಾಠಿ ಸಮುದಾಯದವರೇ ಹೆಚ್ಚಿರುವ ಖಡಕ್ ಗಲ್ಲಿಯಲ್ಲಿ ಉರುಸ್ ಮೆರವಣಿಗೆ ಸಾಗಿದೆ. ಇದೇ ಸ್ಥಳೀಯ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ, ಡಿಸಿಪಿ ನಾರಾಯಣ ಭರಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಲ್ಲುತೂರಾಟ ಮಾಡಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸದ್ಯ ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com