ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.
OSD to Karnataka Minister KJ George caught in bribery case
ಕೆ.ಜೆ. ಜಾರ್ಜ್‌
Updated on

ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಶನಿವಾರ ಸಂಜೆ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲು

ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ(37) ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸ್ ಇಂಧನ ಸಚಿವರ ಒಎಸ್ ಡಿ ವಿರುದ್ಧ ಕೇಸ್ ದಾಖಲಿಸಿದ್ದು, ವಿದ್ಯುತ್ ಮಂಜೂರಾತಿಗಾಗಿ ಡಿಆರ್ ಡೆವಲಪರ್‌ಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

OSD to Karnataka Minister KJ George caught in bribery case
ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕಡೆ ಅಧಿಕಾರಿಗಳಿಂದ ಶೋಧ

ಆರಂಭದಲ್ಲಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರೂ. ನಂತರ ಆರೋಪಿಗಳು 50,000 ರೂಪಾಯಿಗೆ ಒಪ್ಪಿಕೊಂಡರು. ಅದರಂತೆ ಇಂದು ಹಣ ಸ್ವೀಕರಿಸುವ ಸಮಯದಲ್ಲಿ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com