
ಬೆಂಗಳೂರು: ಜಾತಿ ಸಮೀಕ್ಷೆ ಎನ್ನಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೆಂಗಳೂರಿನಲ್ಲಿ ಮೊದಲ ದಿನವಾದ ಶನಿವಾರ ಅಡೆತಡೆಗಳು ಎದುರಾಗಿದ್ದು, ತಮ್ಮ ಕುಂದುಕೊರತೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಗಣತಿದಾರರು ಪ್ರತಿಭಟನೆ ನಡೆಸಿದರು.
ಸುಮಾರು 100 ಗಣತಿದಾರರು ಮಲ್ಲೇಶ್ವರಂ ನಗರಸಭೆ ಕಚೇರಿ ಎದುರು ಧರಣಿ ನಡೆಸಿದರು. ಸೆಪ್ಟೆಂಬರ್ 22 ರಂದು ಕರ್ನಾಟಕದಾದ್ಯಂತ ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರವರೆಗೆ ಮುಂದುವರಿಯುತ್ತದೆ. ಬೆಂಗಳೂರಿನಲ್ಲಿ ಇದನ್ನು ಎರಡು ದಿನಗಳ ಕಾಲ ಹೆಚ್ಚಿಗೆ ನಡೆಸಲು ನಿರ್ಧರಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA)ಮೂಲಗಳ ಪ್ರಕಾರ, ಪ್ರತಿಭಟನಾ ನಿರತ ಗಣತಿದಾರರು ಅನಾರೋಗ್ಯದ ಕುಟುಂಬ ಸದಸ್ಯರನ್ನು ನೋಡಿಕೊಳ್ಳುವುದು ಮತ್ತು ಆರೋಗ್ಯದ ತೊಂದರೆಗಳು ಸೇರಿದಂತೆ ವೈಯಕ್ತಿಕ ಸವಾಲುಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಮಹಿಳೆಯೊಬ್ಬರು ತನ್ನ ವಿಶೇಷ ಮಗುವನ್ನು ಪ್ರತಿಭಟನಾ ಸ್ಥಳಕ್ಕೆ ಕರೆತಂದಿದ್ದು ಏಕೆ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ತೋರಿಸಿದ್ದಾರೆ. ನಂತರ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರತಿಭಟನಾಕಾರರನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಸರ್ಕಾರಿ ಶಿಕ್ಷಕರಾಗಿದ್ದಾರೆ.
ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರಕಾರ ಅಂದಾಜು ರೂ. 420 ಕೋಟಿ ವೆಚ್ಚದಲ್ಲಿ ಸಮೀಕ್ಷೆ ನಡೆಸುತ್ತಿದೆ.
Advertisement