ಖರೀದಿಸಿದ ಸಿನಿಮಾ ಟಿಕೆಟ್‌ ಜೋಪಾನವಾಗಿಟ್ಟುಕೊಳ್ಳಿ: ಪ್ರೇಕ್ಷಕರಿಗೆ ಸರ್ಕಾರ ಸೂಚನೆ

ಚಲನಚಿತ್ರ ವೀಕ್ಷಣೆಗೆ ದುಬಾರಿ ಟಿಕೆಟ್ ದರ ನಿಗದಿ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನಗೊಳ್ಳುವ ಚಲನಚಿತ್ರಗಳ ವೀಕ್ಷಣೆಯ ಟಿಕೆಟ್ ದರವನ್ನು ಗರಿಷ್ಠ 200 ರೂ. ಮಿತಿಗೊಳಿಸಿ ಆದೇಶಿಸಿದೆ. ಅದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದ ಮಲ್ಟಿಪ್ಲೆಕ್ಸ್‌ಗಳಲ್ಲಿನ ಚಲನಚಿತ್ರ ಪ್ರದರ್ಶನದ ಟಿಕೆಟ್ ಮೇಲೆ ವಿಧಿಸಿದ್ದ.200 ಮಿತಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಸಿನಿಮಾ ವೀಕ್ಷಿಸುವವರು ತಮ್ಮ ಟಿಕೆಟ್ ಮತ್ತು ಹಣ ಪಾವತಿಸಿದ ದಾಖಲೆಗಳನ್ನು ಜಾಗರೂಕತೆಯಿಂದ ಇಟ್ಟುಕೊಳ್ಳುವಂತೆ ಚಿತ್ರ ವೀಕ್ಷಕರಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಚಲನಚಿತ್ರ ವೀಕ್ಷಣೆಗೆ ದುಬಾರಿ ಟಿಕೆಟ್ ದರ ನಿಗದಿ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ಮಲ್ಟಿಪ್ಲೆಕ್ಸ್‌ಗಳಲ್ಲಿ ಪ್ರದರ್ಶನಗೊಳ್ಳುವ ಚಲನಚಿತ್ರಗಳ ವೀಕ್ಷಣೆಯ ಟಿಕೆಟ್ ದರವನ್ನು ಗರಿಷ್ಠ 200 ರೂ. ಮಿತಿಗೊಳಿಸಿ ಆದೇಶಿಸಿದೆ. ಅದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಅದರ ಜೊತೆಗೆ ಮಲಿಪ್ಲೆಕ್ ಗಳು ಮಾರಾಟವಾದ ಪ್ರತಿ ಟಿಕೆಟ್‌ಗೆ ಸಮಗ್ರ ಮತ್ತು ಲೆಕ್ಕ ಪರಿಶೋಧಿಸಬಹುದಾದ ದಾಖಲೆಗಳನ್ನು ನಿರ್ವಹಿಸುವಂತೆ ನಿರ್ದೇಶಿಸಿದೆ.

ಒಂದು ವೇಳೆ ಭಾರತೀಯ ಮಲ್ಟಿಪ್ಲೆಕ್ಸ್‌ಗಳ ಸಂಘ ಮತ್ತು ಇತರರು ರಾಜ್ಯ ಸರ್ಕಾರ ನಿಗದಿಪಡಿಸಿದ ಮಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ, ರಾಜ್ಯ ಸರ್ಕಾರದ ಪರ ತೀರ್ಪು ಬಂದರೆ, ಮಲ್ಟಿಪ್ಲೆಕ್ಸ್‌ ಗಳು ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಸಂಗ್ರಹಿಸಿದ ಎಲ್ಲಾ ಮೊತ್ತವನ್ನು ಟಿಕೆಟ್ ಗಳನ್ನು ಬುಕ್ ಮಾಡಿದ ಗ್ರಾಹಕರಿಗೆ ಬುಕ್ಕಿಂಗ್‌ಗೆ ಬಳಸಿದ ಪಾವತಿ ವಿಧಾನದ ಮೂಲಕವೇ ಮರುಪಾವತಿಸಬೇಕು ಎಂದು ನಿರ್ದೇಶಿಸಲಾಗಿದೆ.

File photo
Cinema ticket price cap: ಸಿನಿಮಾ ಟಿಕೆಟ್ ದರ ಮಿತಿ ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್; ಮಾರಾಟ, ಮರುಪಾವತಿಗೆ ನಿರ್ದೇಶನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com