ಮಹಾರಾಷ್ಟ್ರ: ಬೆಳಗಾವಿಯ ಒಂದೇ ಕುಟುಂಬದ ಮೂವರು ಸಮುದ್ರಪಾಲು; ನಾಲ್ವರು ನಾಪತ್ತೆ

ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬವೊಂದು ದಸರಾ ರಜೆಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣಿಸಿತ್ತು. ಈ ವೇಳೆ ಎಂಟು ಮಂದಿಯೂ ಈಜಲು ಸಮುದ್ರಕ್ಕೆ ಇಳಿದಿದ್ದರು.
Three of family drown in sea in Maharashtra's Sindhudurg during picnic; four missing
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡಾ ಬೀಚ್ ಬಳಿ ಬೆಳಗಾವಿಯ ಒಂದೇ ಕುಟುಂಬದ ಮೂವರು ಅರೇಬಿಯನ್ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇತರ ನಾಲ್ವರು ಕಣ್ಮರೆಯಾಗಿದ್ದಾರೆ.

ಮೂಲಗಳ ಪ್ರಕಾರ 16 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಕೆ ಸುರಕ್ಷಿತವಾಗಿದ್ದಾಳೆ.

ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬವೊಂದು ದಸರಾ ರಜೆಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣಿಸಿತ್ತು. ಈ ವೇಳೆ ಎಂಟು ಮಂದಿಯೂ ಈಜಲು ಸಮುದ್ರಕ್ಕೆ ಇಳಿದಿದ್ದರು. ಆದರೆ ಸಮುದ್ರದ ಆಳಕ್ಕೆ ಹೋಗಿದ್ದರಿಂದ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದರು.

Three of family drown in sea in Maharashtra's Sindhudurg during picnic; four missing
ಕುಮಟಾ: ಸೆಲ್ಫೀ ತೆಗೆಯಲು ಹೋಗಿ ಪ್ರವಾಸಿಗ ಸಮುದ್ರಪಾಲು!

ತಕ್ಷಣ ಸ್ಥಳೀಯ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು. ಸಂಜೆ ತಡವಾಗಿ, ಮೂವರ ಮೃತದೇಹಗಳನ್ನು ಹೊರತೆಗೆಯಲಾಯಿತು.

ಮೃತರನ್ನು ಇರ್ಫಾನ್ ಕಿತ್ತೂರ್(34), ಇಬಾದ್ ಕಿತ್ತೂರ್ (13) ಮತ್ತು ನಮೀರಾ ಅಕ್ತರ್(16) ಎಂದು ಗುರುತಿಸಲಾಗಿದೆ.

ಕಾಣೆಯಾದ ಉಳಿದ ನಾಲ್ವರು ಕುಟುಂಬ ಸದಸ್ಯರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ.

ಕರಾವಳಿ ಪೊಲೀಸರು ಮತ್ತು ಸ್ಥಳೀಯ ಸ್ವಯಂಸೇವಕರ ಸಹಾಯದಿಂದ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com