
ಕೋಲಾರ: ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಶವಗಳು ಕೋಲಾರ ಜಿಲ್ಲೆಯ ಬಾವಿಯೊಂದರಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ಧನ್ಯಾ ಬಾಯಿ ಮತ್ತು ಚೈತ್ರಾ ಬಾಯಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಮುಲ್ಬಾಗಲ್ ಪಟ್ಟಣದ ಯಲಚೇಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಗುರುವಾರ ಮನೆಯ ಮುಂದೆ ಆಟವಾಡುತ್ತಿದ್ದಾಗ 13 ವರ್ಷ ವಯಸ್ಸಿನ ಬಾಲಕಿಯರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ, ಪಟ್ಟಣದಿಂದ ಎರಡು ಕಿಮೀ ದೂರದಲ್ಲಿರುವ ಬಾವಿಯಲ್ಲಿ ಬಾಲಕಿಯರ ಶವಗಳು ತೇಲುತ್ತಿರುವುದನ್ನು ಕಂಡ ಕೆಲವು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರಲ್ಲಿ ಒಬ್ಬರ ಬಳಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮತ್ತು ತನ್ನ ಕುಟುಂಬವು ಸಂತೋಷದಿಂದ ಇರಬೇಕೆಂದು ಬಯಸುವುದಾಗಿ ತಿಳಿಸಿದ್ದಾಳೆ.
ಇಬ್ಬರು ಮಕ್ಕಳ ಪೋಷಕರು ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಆರೋಪ ಮಾಡಿದ್ದರೂ, ಮರಣೋತ್ತರ ವರದಿಯಲ್ಲಿ ಲೈಂಗಿಕ ದೌರ್ಜನ್ಯ ಅಥವಾ ಕೊಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಅವರ ದೇಹದ ಮೇಲೆಯೂ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಅಧಿಕಾರಿ ಹೇಳಿದರು.
ಮುಳಬಾಗಿಲು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಬಾಲಕಿಯರು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ತಮ್ಮ ಮನೆಯಿಂದ ಹೊರಬಂದಿದ್ದು, ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.
Advertisement