
ಹೊಸಪೇಟೆ (ವಿಜಯನಗರ): ಹಿರಿಯ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ (64) ಅವರು ಭಾನುವಾರ ವಿಧಿವಶರಾಗಿದ್ದಾರೆ.
ಮೊಗಳ್ಳಿ ಗಣೇಶ್ ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಮೊಗಳ್ಳಿ ಗಣೇಶ್ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಅಂಗಾಂಗ ವೈಫಲ್ಯದಿಂದಾಗಿ ವಿಧಿವಶರಾಗಿದ್ದಾರೆ. ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.
ಮೊಗಳ್ಳಿ ಗಣೇಶ್ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆ ಮದ್ದೂರಿನ ನಿಡಘಟ್ಟದ ಬಳಿ ಇರುವ ಅವರ ಸ್ವಂತ ಊರು ಸಂತೆಮೊಗೇನ ಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೊಗಳ್ಳಿ ಗಣೇಶ್ ಅವರು 1963, ಜುಲೈ 1ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನ ಹಳ್ಳಿಯಲ್ಲಿ ಜನಿಸಿದರು. ಬಾಲ್ಯದ ದಿನಗಳನ್ನು ಹಳ್ಳಿಯಲ್ಲಿ ಕಳೆದ ಗಣೇಶ್ ಅವರು ಹಳ್ಳಿ ಜೀವನದ ಅನುಭವಗಳನ್ನು ಆಧರಿಸಿ ಅವರು ವಿಶಿಷ್ಟ ಕಥೆಗಳನ್ನು ಬರೆಯುತ್ತಿದ್ದರು. ಅವರು ಬರೆದ ಬುಗುರಿ, ನನ್ನಜ್ಜನಿಗೊಂದಾಸೆಯಿತ್ತು, ಒಂದು ಹಳೆಯ ಚಡ್ಡಿ ಇತ್ಯಾದಿ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಾಗಿ ಗುರುತಿಸಲ್ಪಟ್ಟಿವೆ.
Advertisement