
ಬೆಂಗಳೂರು: ಕಾರು ರಿವರ್ಸ್ ತೆಗೆಯುವಾಗ ಆಕಸ್ಮಿಕವಾಗಿ ಚಕ್ರಕ್ಕೆ ಸಿಲುಕಿ 11 ತಿಂಗಳ ಮಗು ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನ ಮಗುವನ್ನು ಅಜಾನ್ ಎಂದು ಗುರುತಿಸಲಾಗಿದ್ದು, ಮಾಗಡಿ ರಸ್ತೆಯಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 9.45 ರ ಸುಮಾರಿಗೆ ಈ ದುರಂತ ನಡೆದಿದೆ.
ಮನೆ ಮಾಲೀಕರು ತಮ್ಮ ಕಾರನ್ನು ರಿವರ್ಸ್ ತೆಗೆಯುವಾಗ ಬಾಡಿಗೆದಾರರ ಮಗು ಆಕಸ್ಮಿಕವಾಗಿ ವಾಹನದ ಹಿಂದಿನಿಂದ ಬಂದಿದ್ದು, ಆ ಮಗುವಿನ ಮೇಲೆ ಕಾರು ಹರಿದಿದೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮನೆ ಮಾಲೀಕ, ತಕ್ಷಣ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಗಾಯಗಳಿಂದ ಮಗು ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಾರು ಚಾಲಕ ಸ್ವಾಮಿಯನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ಮಾಹಿತಿ ನೀಡಿದ್ದಾರೆ.
Advertisement