ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲು ತ್ವರಿತ ಕ್ರಮ ಕೈಗೊಳ್ಳಲಾಗಿದೆ: ಡಿಕೆ ಶಿವಕುಮಾರ್

ಬಿಜೆಪಿ ಶಾಸಕ ಕೆ ಗೋಪಾಲಯ್ಯ ಮತ್ತು ಪಕ್ಷದ ಕಾರ್ಯಕರ್ತರು ಸೆಪ್ಟೆಂಬರ್ 24 ರಂದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ನಗರದಲ್ಲಿನ ರಸ್ತೆ ಗುಂಡಿಗಳ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
DCM DK Shivakumar claims swift action taken to repair potholes in Bengaluru.
ಡಿಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆಯನ್ನು ನಿವಾರಿಸುವ ದುರಸ್ತಿ ಕಾರ್ಯಗಳು ಭರದಿಂದ ಸಾಗಿವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಾಶ್ವತ ಗುಣಮಟ್ಟದೊಂದಿಗೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಎಂಜಿನಿಯರ್‌ಗಳು ಮತ್ತು ಕಾರ್ಮಿಕರು ಸ್ಥಳದಲ್ಲಿದ್ದಾರೆ ಎಂದು ಅವರು ಹೇಳಿದರು.

'ಬೆಂಗಳೂರಿನಾದ್ಯಂತ ಗುಂಡಿ ದುರಸ್ತಿ ಕಾರ್ಯಗಳು ಭರದಿಂದ ಸಾಗುತ್ತಿವೆ. ನಮ್ಮ ಎಂಜಿನಿಯರ್‌ಗಳು ಮತ್ತು ಕಾರ್ಮಿಕರು ಪ್ರತಿದಿನವೂ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿ ದುರಸ್ತಿಯಲ್ಲೂ ಶಾಶ್ವತ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುತ್ತಾರೆ. ಬೆಂಗಳೂರಿನ ಬೆಳೆಯುತ್ತಿರುವ ಆಕಾಂಕ್ಷೆಗಳಿಗೆ ಹೊಂದಿಕೆಯಾಗುವ ಸುಗಮ ಮತ್ತು ಸುರಕ್ಷಿತ ರಸ್ತೆಗಳನ್ನು ತಲುಪಿಸಲು ನಾವು ಬದ್ಧರಾಗಿದ್ದೇವೆ' ಎಂದು ಅವರು X ನಲ್ಲಿ ಬರೆದಿದ್ದಾರೆ.

ಬೆಂಗಳೂರಿನ ರಸ್ತೆಗಳ ದುರಸ್ತಿ ಕಾರ್ಯವನ್ನು ಅಕ್ಟೋಬರ್ 31ರೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ವಿಧಿಸಿದ್ದಾರೆ ಮತ್ತು ನಗರದ ಗುಂಡಿಗಳ ಸಮಸ್ಯೆಯನ್ನು ಪರಿಹರಿಸಲು ಹೆಚ್ಚುವರಿಯಾಗಿ 750 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಬಿಜೆಪಿ ಶಾಸಕ ಕೆ ಗೋಪಾಲಯ್ಯ ಮತ್ತು ಪಕ್ಷದ ಕಾರ್ಯಕರ್ತರು ಸೆಪ್ಟೆಂಬರ್ 24 ರಂದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ನಗರದಲ್ಲಿನ ರಸ್ತೆ ಗುಂಡಿಗಳ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬಿಜೆಪಿ ನಾಯಕ ಎನ್.ಎಲ್. ನರೇಂದ್ರ ಬಾಬು ಕಾಂಗ್ರೆಸ್ ಅನ್ನು ಟೀಕಿಸಿದರು ಮತ್ತು ಬೆಂಗಳೂರನ್ನು 'ಗುಂಡಿಗಳ ನಗರ' ಎಂದು ಕರೆದರು.

DCM DK Shivakumar claims swift action taken to repair potholes in Bengaluru.
'ರಸ್ತೆ ಗುಂಡಿಗಳು ಸ್ವಾಭಾವಿಕವಾಗಿ ಆಗುತ್ತವೆ ಹೊರತು ನಾವು ಮಾಡುವುದಲ್ಲ; ಬಿಜೆಪಿಯವರು ರಾಜಕೀಯ ಮಾಡ್ತಾರೆ': ಡಿ.ಕೆ ಶಿವಕುಮಾರ್

'ಬೆಂಗಳೂರು ಒಂದು ಕಾಲದಲ್ಲಿ ನಿವೃತ್ತ ಜನರ ಸ್ವರ್ಗ, ಐಟಿ ಸಿಟಿ ಮತ್ತು ಬಿಟಿ ಸಿಟಿ ಎಂದು ಕರೆಯಲ್ಪಡುತ್ತಿತ್ತು. ಇಂದು ಅದು 'ಗುಂಡಿಗಳ ನಗರ'ವಾಗಿ ಮಾರ್ಪಟ್ಟಿದೆ. ಇದಕ್ಕೆ ಯಾರು ಹೊಣೆ?' ಎಂದು ಅವರು ಎಎನ್‌ಐಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಸ್ತೆಗಳಲ್ಲಿನ ಗುಂಡಿಗಳಿಗೆ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ದೂಷಿಸಿದರು. 'ಬಿಜೆಪಿ ಎಂದಿಗೂ ಸಂತೋಷವಾಗಿರುವುದಿಲ್ಲ. ಈ ಎಲ್ಲ ಗುಂಡಿಗಳಿಗೂ ಬಿಜೆಪಿ ಆಡಳಿತವೇ ಕಾರಣ. ಕರ್ನಾಟಕದ ರಸ್ತೆಗಳ ದುಸ್ಥಿತಿಗೆ ಅವರು ಕಾರಣರು' ಎಂದು ಅವರು ಪಾಟ್ನಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

'ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳ ಸಮಸ್ಯೆ ಹೆಚ್ಚಾಗಿದೆ. ದೇಶದ ಎಲ್ಲ ನಗರಗಳಲ್ಲಿ ಗುಂಡಿಗಳಿವೆ. ಆದರೆ, ಬೆಂಗಳೂರು ಮಾತ್ರ ಸುದ್ದಿಯಾಗುತ್ತಿದೆ. ಇತರ ಸ್ಥಳಗಳಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಮಾಧ್ಯಮಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿದೆ ಮತ್ತು ಈ ಸಮಸ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಲಾಗುತ್ತಿದೆ' ಎಂದು ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com