ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯವೂ ಬದಲಾವಣೆ

ಶಾಲಾ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
Karnataka caste census deadline extended
ಸಮೀಕ್ಷೆ ನಡೆಸುತ್ತಿರುವುದು.
Updated on

ಬೆಂಗಳೂರು: ರಾಜ್ಯ ಸರ್ಕಾರ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ("ಜಾತಿ ಗಣತಿ" ಎಂದೇ ವ್ಯಾಪಕವಾಗಿ ಕರೆಯಲಾಗುತ್ತಿದೆ)ಯ ಅವಧಿಯನ್ನು ವಿಸ್ತರಣೆ ಮಾಡಿದೆ.

ಶಾಲಾ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಕಳೆದ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭವಾಗಿದ್ದು,. ಈ ಗಣತಿಗೆ ರಾಜ್ಯ ಸರ್ಕಾರ ಅಕ್ಟೋಬರ್ 7ರಂದು ಡೆಡ್​ಲೈನ್ ನೀಡಿತ್ತು. ಆದರೆ ಸರ್ಕಾರಕ್ಕೆ ಕೊಟ್ಟ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Karnataka caste census deadline extended
ಸಮಾನತೆ ಬೇಡ ಎನ್ನುವವರು ಜಾತಿ ಗಣತಿ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಸಮೀಕ್ಷೆಯ ಅವಧಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್​ 24ರವರೆಗೆ ವಿಸ್ತರಿಸಲಾಗಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿಅಕ್ಟೋಬರ್ 12ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 24ರ ವರೆಗೆ ಶಾಲಾ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗಿ ಆಗಬೇಕು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಳ್ಳುವಂತೆ ಆದೇಶಿಸಲಾಗಿದೆ.

Karnataka caste census deadline extended
ಜಾತಿಗಣತಿ: ಡೆಡ್​ಲೈನ್ ಅಕ್ಟೋಬರ್ 7ಕ್ಕೆ ಅಂತ್ಯ; ಗಡುವು ಸಮೀಪಿಸಿದರೂ ಇನ್ನೂ ಮುಗಿಯದ ಸಮೀಕ್ಷೆ..!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com