ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರ ಮತ್ತೆ ಮುನ್ನಲೆಗೆ; ಸಿದ್ದರಾಮಯ್ಯ ಸಮ್ಮುಖದಲ್ಲೇ ಒತ್ತಾಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಮಠಾಧೀಶರ ಒಕ್ಕೂಟ ಆಯೋಜಿಸಿದ್ದ 'ಬಸವ ಸಂಸ್ಕೃತಿ ಅಭಿಯಾನ'ದ ಸಮಾರೋಪ ಸಮಾರಂಭದಲ್ಲಿ ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಬೇಡಿಕೆ ಕೇಳಿಬಂದಿದೆ.
Representative Image
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ
Updated on

ಬೆಂಗಳೂರು: ರಾಜ್ಯ ಸರ್ಕಾರ ಮಾಡಿರುವ ಶಿಫಾರಸು ಆಧಾರದಲ್ಲಿ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ಕೇಂದ್ರ ಸರ್ಕಾರ ನೀಡಬೇಕು ಎನ್ನುವ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಮಠಾಧೀಶರ ಒಕ್ಕೂಟ ಆಯೋಜಿಸಿದ್ದ 'ಬಸವ ಸಂಸ್ಕೃತಿ ಅಭಿಯಾನ'ದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಬೇಡಿಕೆ ಕೇಳಿಬಂದಿದೆ.

ಭಾನುವಾರ ನಡೆದ ಸಮಾರಂಭದಲ್ಲಿ ಅಂಗೀಕರಿಸಲಾದ ಐದು ನಿರ್ಣಯಗಳಲ್ಲಿ ಲಿಂಗಾಯತರಿಗೆ ಧಾರ್ಮಿಕ ಮಾನ್ಯತೆ ನೀಡುವ ಬಗ್ಗೆ ಜಾಗೃತಿ ಮೂಡಿಸುವುದು ಸೇರಿದ್ದು, 'ಎಲ್ಲ ಲಿಂಗಾಯತರು ಮೊದಲು ಭಾರತೀಯರು. ಲಿಂಗಾಯತ ಧರ್ಮ ಕನ್ನಡದ ಧರ್ಮ. ದೇಶ ಧರ್ಮಕ್ಕಿಂತ ಮೊದಲು. ರಾಷ್ಟ್ರೀಯ ಪ್ರಜ್ಞೆಯೊಂದಿಗೆ ದೇಶದ ಏಕತೆಗಾಗಿ ಯಾವಾಗಲೂ ಶ್ರಮಿಸಿ' ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಲಿಂಗಾಯತ ಧರ್ಮವು 12ನೇ ಶತಮಾನದಲ್ಲಿ ಬಸವಣ್ಣ ಮತ್ತು ಇತರ ಶರಣರು ಸ್ಥಾಪಿಸಿದ ಶ್ರೇಷ್ಠ ಧರ್ಮವಾಗಿದೆ. ಭೌಗೋಳಿಕವಾಗಿ, ನಾವೆಲ್ಲರೂ ಹಿಂದೂಗಳು. ಲಿಂಗಾಯತರು ಬೌದ್ಧರು, ಜೈನರು ಮತ್ತು ಸಿಖ್ಖರಂತೆ ಸರ್ಕಾರಿ ಸವಲತ್ತುಗಳು ಮತ್ತು ಮೀಸಲಾತಿ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಧಾರ್ಮಿಕ ಮಾನ್ಯತೆಗಾಗಿ ಜಾಗೃತಿ ಮೂಡಿಸುವುದನ್ನು ಮುಂದುವರಿಸಬೇಕು ಎಂದು ನಿರ್ಧಾರ ಕೈಗೊಳ್ಳಲಾಯಿತು.

ಲಿಂಗಾಯತ ಧರ್ಮವು ಸಮಾನತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ನಿಜವಾದ ಧರ್ಮ ಎಂದು ಹೇಳುತ್ತಾ, 'ನಾವೆಲ್ಲರೂ ಲಿಂಗಾಯತರಲ್ಲಿನ ಸಣ್ಣ, ಹಿಂದುಳಿದ ಉಪಜಾತಿಗಳನ್ನು ಸೇರಿಸಿಕೊಳ್ಳಬೇಕು, ಅವರ ಪ್ರಗತಿಗಾಗಿ ಶ್ರಮಿಸಬೇಕು, ಉಪಜಾತಿಗಳ ನಡುವಿನ ಎಲ್ಲ ವ್ಯತ್ಯಾಸಗಳನ್ನು ತ್ಯಜಿಸಬೇಕು ಮತ್ತು ಉಪಜಾತಿಗಳ ನಡುವೆ ವೈವಾಹಿಕ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು' ಎಂದು ಅದು ಹೇಳಿದೆ.

Representative Image
ನಮ್ಮ ಜಾತಿ ಯಾವುದೇ ಆಗಿರಲಿ, ನಾವೆಲ್ಲರೂ ಶೂದ್ರರೇ: ಸಿಎಂ ಸಿದ್ದರಾಮಯ್ಯ

'ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂಬಿ ಪಾಟೀಲ್, ಶರಣ್ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇತರರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತ್ಯೇಕ ಧರ್ಮದ ಸ್ಥಾನಮಾನದ ವಿಷಯವು ಕಾಂಗ್ರೆಸ್ ಪಕ್ಷಕ್ಕೆ ಭಾರಿ ನಷ್ಟವನ್ನುಂಟುಮಾಡಿದೆ ಎಂದು ನಂಬಲಾಗಿದೆ. ಲಿಂಗಾಯತ ಸಮುದಾಯಕ್ಕೆ 'ಧಾರ್ಮಿಕ ಅಲ್ಪಸಂಖ್ಯಾತ' ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರವು ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಿಗೆ ಕಾರಣವಾಯಿತು ಎನ್ನಲಾಗಿದೆ.

ಅಖಿಲ ಭಾರತ ವೀರಶೈವ ಮಹಾಸಭಾ ನೇತೃತ್ವದ ಒಂದು ವರ್ಗವು ವೀರಶೈವರು ಮತ್ತು ಲಿಂಗಾಯತರು ಒಂದೇ ಎಂದು ಪ್ರತಿಪಾದಿಸಿ ಪ್ರತ್ಯೇಕ ಧರ್ಮದ ಸ್ಥಾನಮಾನವನ್ನು ಕೋರಿದ್ದರೆ, ಇನ್ನೊಂದು ಗುಂಪು ವೀರಶೈವರು ಹಿಂದೂ ಧರ್ಮದ ಭಾಗವಾಗಿರುವ ಶೈವರ ಏಳು ಪಂಗಡಗಳಲ್ಲಿ ಒಂದು ಎಂದು ನಂಬುವುದರಿಂದ ಲಿಂಗಾಯತರಿಗೆ ಮಾತ್ರ ಪ್ರತ್ಯೇಕ ಧರ್ಮ ಬೇಕೆಂದು ಬಯಸಿತು.

ಭಾನುವಾರವೂ ಬಿಜೆಪಿ ಸಮುದಾಯದ ಮುಖಂಡರು ಕಾರ್ಯಕ್ರಮದಿಂದ ದೂರ ಉಳಿದಿದ್ದರಿಂದ ವಿಭಜನೆ ಎದ್ದು ಕಾಣುತ್ತಿತ್ತು.

Representative Image
Namma Metro ಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com