

ಬೆಂಗಳೂರು: ಬಿಎಂಟಿಸಿ ಬಸ್‌ವೊಂದು ಅಂಗಡಿಗೆ ನುಗ್ಗಿದ ಘಟನೆ ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.
ಶಂಕರ್ ನಾಗ್ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7:05 ಕ್ಕೆ ಬಿಎಂಟಿಸಿ ಬಸ್ ( ಕೆಎ-57 ಎಫ್-3535) ಅಂಗಡಿಗೆ ಡಿಕ್ಕಿ ಹೊಡೆದಿದೆ.
ಬಸ್ಸಿನ ಮುಂಭಾಗವು ಹಾನಿಗೊಳಗಾಗಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿದು ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ತನಿಖೆ ಆರಂಭಿಸಿದ್ದಾರೆ.
Advertisement