ಬೆಂಗಳೂರು: ಗುಂಡು ಹಾರಿಸಿಕೊಂಡು ಸೆಕ್ಯುರಿಟಿ ಗಾರ್ಡ್ ಆತ್ಮಹತ್ಯೆ

ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಲಖನ್ ವಿಶ್ವಕರ್ಮ ಎಂದು ಗುರ್ತಿಸಲಾಗಿದೆ. ಈತ ಕಳೆದ ಒಂದೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ.
Stop Suicide (file pic)
ಸಾಂಕೇತಿಕ ಚಿತ್ರonline desk
Updated on: 

ಬೆಂಗಳೂರು: ಡಾ. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಸತಿ ಸಂಕೀರ್ಣದಲ್ಲಿ ಭದ್ರತಾ ಸಿಬ್ಬಂದಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಲಖನ್ ವಿಶ್ವಕರ್ಮ (32) ಎಂದು ಗುರ್ತಿಸಲಾಗಿದೆ. ಈತ ಕಳೆದ ಒಂದೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ ಡಬಲ್ ಬ್ಯಾರೆಲ್ ಬಂದೂಕಿನಿಂದ ಗುಂಡಿ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಭದ್ರತಾ ಸಂಸ್ಥೆಯಿಂದ ನೇಮಕಗೊಂಡ ನಂತರ ಈತ ಬಂದೂಕು ಪರವಾನಗಿ ಪಡೆದಿದ್ದ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿಲ್ಲ. ಕುಟುಂಬದಲ್ಲಿ ಮನಸ್ತಾಪಗಳಿದ್ದಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

Stop Suicide (file pic)
ಹೆಣ್ಣು ಮಗು ಜನನ: ಪತಿ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆಗೆ ಶರಣು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com