
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮುಂದುವರಿಸಿದೆ. ಇದರ ಹಿಂದೆ ಬಹುಭಾಷಾ ನಟ, ನಿರ್ದೇಶಕನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ (SIT) ನೊಟೀಸ್ ನೀಡಲು ಮುಂದಾಗಿದೆ.
ಅನನ್ಯಾ ಭಟ್ ಬಗ್ಗೆ ಕಟ್ಟುಕತೆ ಕಟ್ಟಿ ಸುಜಾತಾ ಭಟ್ ಎಲ್ಲರನ್ನು ನಂಬಿಸುವ ಕೆಲಸ ಮಾಡಿದ್ದರು. ಬಳಿಕ ಇದೆಲ್ಲವನ್ನು ಜಮೀನು ವಿಚಾರವಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಇದೀಗ ಅನನ್ಯಾ ಭಟ್ ಕೇಸ್ ಮತ್ತೆ ಮುನ್ನೆಲೆಗೆ ಬಂದಿದ್ದು, ಪ್ರಕರಣದ ತನಿಖೆಯನ್ನು ಎಸ್‌ಐಟಿ ಮುಂದುವರಿಸಿದೆ.
ಬಹುಭಾಷಾ ನಟನ ಸೋದರನ ಹೆಸರು
ವಾಸಂತಿ ಕೇಸ್ ಬಗ್ಗೆ ತನಿಖೆಗಿಳಿದಾಗ ಎಸ್‌ಐಟಿಗೆ ಬಹುಭಾಷಾ ನಟನ ಸಹೋದರನ ಹೆಸರು ಕೇಳಿಬಂದಿದೆ. ನಟನ ಸಹೋದರ ಕಾಲಿವುಡ್ ನಟನಾಗಿದ್ದು, ವಾಸಂತಿ ಗಂಡನ ಗೆಳೆಯ ಎಂದು ತಿಳಿದುಬಂದಿದೆ. ಸದ್ಯ ಕಾಲಿವುಡ್ ನಟ ಚೆನ್ನೈನಲ್ಲಿರುವುದಾಗಿ ಮಾಹಿತಿಯಿದ್ದು, ಆತನ ವಿಳಾಸ ಪತ್ತೆ ಮಾಡುವಲ್ಲಿ ಎಸ್‌ಐಟಿ ಕಾರ್ಯನಿರತವಾಗಿದೆ. ವಿಳಾಸ ಸಿಗದ ಹಿನ್ನೆಲೆ ನೋಟಿಸ್ ನೀಡಲು ವಿಳಂಬವಾಗಿದೆ.
ಸುಜಾತಾ ಭಟ್ ಗೆ ಪಶ್ಚಾತಾಪ
ಇನ್ನು ಅನನ್ಯಾ ಭಟ್ ಕೇಸಿನಲ್ಲಿ ತಾನು ತಪ್ಪು ಮಾಡಿದ್ದು ಈ ಬಗ್ಗೆ ಕ್ಷಮೆ ಕೇಳುತ್ತೇನೆ. ನನ್ನ 60 ವರ್ಷದ ಜೀವನದಲ್ಲಿ ಇದೊಂದು ನನಗೆ ಕಪ್ಪು ಚುಕ್ಕಿ, ಇನ್ನಾದರೂ ನನಗೆ ಉತ್ತಮ ಜೀವನ ನಡೆಸುವ ಆಸೆಯಿದೆ, ಧರ್ಮಸ್ಥಳಕ್ಕೆ ಹೋಗಿ ತಪ್ಪು ಕಾಣಿಕೆ ಹಾಕುತ್ತೇನೆ, ಧರ್ಮಸ್ಥಳಕ್ಕೆ ಹೋಗಿ ಕಲ್ಲು ಹೊಡೆಯುತ್ತೇನೆ ಎಂದು ಹೇಳಿದ್ದೇನೆ, ನನ್ನಿಂದ ತಪ್ಪಾಗಿದೆ, ವೀರೇಂದ್ರ ಹೆಗ್ಗಡೆಯವನ್ನು ಭೇಟಿ ಮಾಡಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ನಟನ ಸೋದರನಿಗೂ ನನಗೂ ಯಾವುದೇ ಸಂಬಂಧವಿಲ್ಲ, ನಟನ ಸೋದರನ ಮನೆಯಲ್ಲಿ ವಾಸಂತಿ ಇರಬಹುದು ಎಂಬ ಶಂಕೆ ನನಗಿದೆ. ಅದನ್ನು ಎಸ್ ಐಟಿ ತನಿಖೆ ವೇಳೆ ಹೇಳಿದ್ದೆ, ಅವರು ತನಿಖೆ ಮಾಡಬಹುದು ಎಂದರು.
Advertisement