ಮಡಿಕೇರಿ: ಜಾತಿ ಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕನ ಮೇಲೆ ಕಾಡಾನೆ ದಾಳಿಗೆ ಯತ್ನ

ಕೊಡಗಿನ ಮಾಲ್ದಾರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಣಿಕೊಪ್ಪಲು ಪ್ರೌಢಶಾಲೆಯ ಶಿಕ್ಷಕ ಶಿವರಾಮ್ ಅವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
Teacher on caste census duty injured in a wild elephant attack
ಶಿಕ್ಷಕ ಶಿವರಾಮ್ ಬಿಟ್ಟು ಹೋಗಿರುವ ಬೈಕ್
Updated on

ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಕೊಡಗಿನ ಶಿಕ್ಷಕರೊಬ್ಬರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ ನಡೆಸಿದ ಘಟನೆ ಬುಧವಾರ ನಡೆದಿದೆ.

ಕೊಡಗಿನ ಮಾಲ್ದಾರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಣಿಕೊಪ್ಪಲು ಪ್ರೌಢಶಾಲೆಯ ಶಿಕ್ಷಕ ಶಿವರಾಮ್ ಅವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಶಿವರಾಮ್ ಅವರು ಜಾತಿ ಗಣತಿ ಸಮೀಕ್ಷೆ ನಡೆಸಲು ಅವರೆಗುಂಡ ಅರಣ್ಯ ಪ್ರದೇಶದ ಮೂಲಕ ಮಾಲ್ದಾರೆ ಗ್ರಾಮಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಗ್ರಾಮದ ದುಬಾರೆ ಬುಡಕಟ್ಟು ಭಾಗದಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

Teacher on caste census duty injured in a wild elephant attack
Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

ಶಿವರಾಮ್ ಅವರು ಬೈಕ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಒಂಟಿ ಆನೆಯೊಂದು ಅವರ ಮೇಲೆ ದಾಳಿಗೆ ಯತ್ನಿಸಿದೆ. ದಾಳಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅವರ ಬೈಕ್‌ ನಿಯಂತ್ರಣ ಕಳೆದುಕೊಂಡು ಕಳೆಗೆ ಬಿದ್ದಿದೆ. ಅವರ ಕಾಲಿಗೆ ಗಾಯಗಳಾಗಿದ್ದು, ಬೈಕ್ ಅನ್ನು ಅಲ್ಲಿಯೇ ಬಿಟ್ಟು ಓಡಿದ ಶಿವರಾಮ್ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗಿದ್ದು, ಶಿವರಾಮ್ ಅವರನ್ನು ತಕ್ಷಣವೇ ಗ್ರಾಮದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಮತ್ತು ಇತರ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಶಿಕ್ಷಕನ ಆರೋಗ್ಯ ವಿಚಾರಿಸಿದರು.

ಶೀರ್ಷಿಕೆ: ಆನೆ ದಾಳಿಯ ಸಮಯದಲ್ಲಿ ಶಿಕ್ಷಕ ಶಿವರಾಮ್ ತನ್ನ ಬೈಕನ್ನು ತ್ಯಜಿಸಿ ಜೀವ ಉಳಿಸಿಕೊಳ್ಳಲು ಓಡಿಹೋದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com