
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ವೊಂದು ಬೆಂಗಳೂರಿನ ಚಾಮರಾಜಪೇಟೆಯ ಪೆಟ್ರೋಲ್ ಬಂಕ್‌ಗೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿರುವ ನಯಾರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ಮೂಲಗಳ ಪ್ರಕಾರ ಶ್ರೀರಂಗಪಟ್ಟಣದಿಂದ ಕೆಆರ್ ಮಾರ್ಕೆಟ್ಗೆ ಅಡುಗೆ ಎಣ್ಣೆ ಕೊಂಡೊಯ್ಯುತ್ತಿದ್ದ ಕಂಟೇನರ್ ಟ್ರಕ್ ಬ್ರೇಕ್ ಫೇಲ್ ಆಗಿ ಏಕಾಏಕಿ ಪೆಟ್ರೋಲ್ ಬಂಕ್‌ಗೆ ನುಗ್ಗಿದೆ.
ಕಂಟೇನರ್ ನುಗ್ಗಿದ ರಭಸಕ್ಕೆ ಪೆಟ್ರೋಲ್ ಬಂಕ್ ಒಳಗಿದ್ದ ಅಂಗಡಿ ಜಖಂಗೊಂಡಿದೆ. ಅಂಗಡಿ ಒಳಗಿದ್ದ ಸಿಬ್ಬಂದಿ ಹಾಗೂ ಕಂಟೈನರ್ ಚಾಲಕನ ಕೈಗೆ ಗಾಯಗಳಾಗಿವೆ.
ಘಟನೆ ಸಂದರ್ಭ ಅನೇಕ ಗ್ರಾಹಕರು ಬೈಕ್ ಹಾಗೂ ಇತರ ವಾಹನಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದರು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಾಮರಾಜಪೇಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.https://youtube.com/shorts/RFjmbDjKoQ4?feature=share
Advertisement