
ಬೆಂಗಳೂರು: ಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಆರೋಗ್ಯ ಸುಧಾರಿಸಿದೆ ಮತ್ತು ಅವರು ಪ್ರಸ್ತುತ "ಸ್ಥಿರ ಮತ್ತು ಹರ್ಷದಿಂದ" ಇದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲ್ ಆಸ್ಪತ್ರೆ ಶುಕ್ರವಾರ ತಿಳಿಸಿದೆ.
92 ವರ್ಷದ ಜೆಡಿ(ಎಸ್) ವರಿಷ್ಠ ದೇವೇಗೌಡ ಅವರು ಚೇತರಿಸಿಕೊಂಡಿದ್ದು, ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಸಾಮಾನ್ಯ ವಾರ್ಡ್ ನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ತಿಳಿಸಿದೆ.
"ಜ್ವರ ಮತ್ತು ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಅಕ್ಟೋಬರ್ 6 ರಂದು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.
ದೇವೇಗೌಡರ ಆರೋಗ್ಯ ಸ್ಥಿತಿ ಸುಧಾರಿಸಿದೆ ಮತ್ತು ಪ್ರಸ್ತುತ ಸ್ಥಿರ ಹಾಗೂ ಹರ್ಷದಿಂದ ಇದ್ದು, ಸಾಮಾನ್ಯ ವಾರ್ಡ್‌ನಲ್ಲಿ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡಲಾಗುತ್ತಿದೆ" ಎಂದು ಮಣಿಪಾಲ್ ಆಸ್ಪತ್ರೆಗಳ ಅಧ್ಯಕ್ಷ ಡಾ. ಎಚ್. ಸುದರ್ಶನ್ ಬಲ್ಲಾಳ್ ಅವರ ವೈದ್ಯಕೀಯ ಬುಲೆಟಿನ್ ತಿಳಿಸಿದೆ.
Advertisement