
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಅವಘಡ ಸಂಭವಿಸಿದ್ದು, ಸಾರಿಗೆ ಸಂಸ್ಥೆ ಚಾಲಕ ದಿಢೀರ್ ಅನಾರೋಗ್ಯಕ್ಕೀಡಾದ ಕಾರಣ ಸರಣಿ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಶನಿವಾರ ಈ ಘಟನೆ ಸಂಭವಿಸಿದ್ದು, ಬಿಎಂಟಿಸಿ ಚಾಲಕ ಕರ್ತವ್ಯದಲ್ಲಿದ್ದಾಗಲೇ ಫಿಡ್ಸ್ (seizure) ಕಾಣಿಸಿಕೊಂಡಿದೆ. ಪರಿಣಾಮ ಬಸ್, 2 ಕಾರು, ಆಟೋ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ.
ಕೂಡಲೇ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಸಾರಿಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನೀಡಲಾಗುತ್ತಿದೆ.
Advertisement