ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಆರೋಪಿಯನ್ನು ಬಾಲಕಿಯ ನೆರೆಮನೆಯ ಆರ್ಯನ್ ಕುಮಾರ್ ಎಂದು ಗುರುತಿಸಲಾಗಿದೆ. ಕೆಟ್ಟ ಸ್ಪರ್ಶದ ಕುರಿತು ಬಾಲಕಿ ಪೋಷಕರಿಗೆ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
sexual harassment
ಲೈಂಗಿಕ ಕಿರುಕುಳ (ಸಾಂಕೇತಿಕ ಚಿತ್ರ)online desk
Updated on

ಬೆಂಗಳೂರು: 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 25 ವರ್ಷದ ಖಾಸಗಿ ಕಂಪನಿ ಉದ್ಯೋಗಿಯೋರ್ವನನ್ನು ಕುಂಬಳಗೋಡು ಪೊಲೀಸರು ಶನಿವಾರ ಬಂಧನಕ್ಕೊಪಡಿಸಿದ್ದಾರೆ.

ಆರೋಪಿಯನ್ನು ಬಾಲಕಿಯ ನೆರೆಮನೆಯ ಆರ್ಯನ್ ಕುಮಾರ್ ಎಂದು ಗುರುತಿಸಲಾಗಿದೆ. ಕೆಟ್ಟ ಸ್ಪರ್ಶದ ಕುರಿತು ಬಾಲಕಿ ಪೋಷಕರಿಗೆ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಪೋಷಕರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿದ್ದು, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಹಾಗೂ ಬಾಲಕಿಯ ಹೇಳಿಕೆ ಆಧರಿಸಿ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮತ್ತೊಂದು ಘಟನೆಯಲ್ಲಿ, 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು ಹೋಟೆಲ್ ಉದ್ಯೋಗಿಯೊಬ್ಬನನ್ನು ಬಂಧಿಸಿದ್ದಾರೆ.

sexual harassment
ಆನ್‌ಲೈನ್ ಲೈಂಗಿಕ ಶೋಷಣೆ, ದೌರ್ಜನ್ಯ ತಪ್ಪಿಸಲು ಮಕ್ಕಳು-ಪೋಷಕರ ನಡುವಿನ ಸಂಬಂಧ ಉತ್ತಮವಾಗಿರಬೇಕು: KSCPCR ಅಧ್ಯಕ್ಷ ನಾಗಣ್ಣ ಗೌಡ

ಅಕ್ಟೋಬರ್ 5 ರಂದು ಘಟನೆ ನಡೆದಿದ್ದು, ಆರೋಪಿ ಗಿರೀಶ್ ಬಾಲಕಿಗೆ ಚಾಕೊಲೇಟ್ ನೀಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ನಂತರ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com