
ಬೆಂಗಳೂರು: ಬೆಂಗಳೂರಿನ ಮತ್ತೀಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಾಕ್ರಮದ ವೇಳೆ ದೊಡ್ಡ ಹೈಡ್ರಾಮಾ ನಡೆಯಿತು. ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು. ಈ ವೇಳೆ ಅಲ್ಲಿಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಸ್ಥಳೀಯ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಹಾಗೂ ಸಂಸದರ ಫೋಟೋ ಹಾಕಿಲ್ಲ. ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಕಾರ್ಯಕ್ರಮವೋ ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರನ್ನು ಮುನಿರತ್ನ ಪ್ರಶ್ನಿಸಿದರು.
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮುನಿರತ್ನರನ್ನು ವೇದಿಕೆಯಿಂದ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ HMT ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಎಂಬಾತ ಮುನಿರತ್ನ ಧರಿಸಿದ್ದ RSS ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement