NCW ಕರ್ನಾಟಕ ಭೇಟಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ! ಕಾರಣವೇನು?

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ
C. Manjula
ಸಿ ಮಂಜುಳಾ
Updated on

ಬೆಂಗಳೂರು: ಮೇ 2023 ರಿಂದ ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಆರೋಪಿಸಿದ್ದು, ರಾಜ್ಯಕ್ಕೆ ಭೇಟಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗವನ್ನು (ಎನ್‌ಸಿಡಬ್ಲ್ಯೂ) ಒತ್ತಾಯಿಸಿದೆ.

ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ ಮಂಜುಳಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅತ್ಯಾಚಾರ, ಕೊಲೆ, ಬಾಣಂತಿಯರ ಸಾವುಗಳು ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಅವರು ಟೀಕಿಸಿದ್ದಾರೆ.

ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಶಕ್ತಿ ಯೋಜನೆ ಸಂಪೂರ್ಣವಾಗಿ ವೈಫಲ್ಯಕ್ಕೊಳಗಾಗಿದೆ ಎಂಬ ಹೇಳಿಕೆ ಸೇರಿದಂತೆ 18 ಘಟನೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

C. Manjula
ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ ವಲಸಿಗರ ಪರದಾಟ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com