ರಾಜ್ಯ

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ

ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ
ಮಾಜಿ ಪ್ರಧಾನಿ ದೇವೇಗೌಡ
Published On :

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದಾಗಿ ದೇವೇಗೌಡ ಅವರು, ಅಕ್ಟೋಬರ್ 6ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ದೇವೇಗಡ ಅವರಿಗೆ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಿದ್ದು, ಇದೀಗ ಅವರ ಆರೋಗ್ಯ ಸ್ಥಿರವಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.