
ಬೆಂಗಳೂರು: ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಕಾರ್ಯಕ್ರಮಗಳನ್ನ ನಿಷೇಧ ಮಾಡಬೇಕು ಎಂದು ಸಿಎಂಗೆ ಪತ್ರ ಬರೆದಿರೋದು ನನಗೇನು ಗೊತ್ತಿಲ್ಲ. ಆದರೆ ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಎಂಬುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಪತ್ರ ಬರೆದಿರೋದು ಎಲ್ಲವೂ ನಿಮಗೆ ಗೊತ್ತಿದೆಯಲ್ಲ. ನೀವೇ ಹೇಳಿದಂತೆ ಅವರು ಪತ್ರ ಬರೆದಿದ್ದಾರೆ. ಶಾಲೆ, ಸರ್ಕಾರಿ ಜಾಗದಲ್ಲಿ ಬೇಡ ಅಂತ ಹೇಳಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ.
ಸಿಎಂ ಅವರು ಅದರ ಬಗ್ಗೆ ಚರ್ಚೆ ಮಾಡ್ತಾರೇನೋ, ಸಿಎಸ್ ಅವರು ನಿರ್ಧಾರ ತೆಗೆದುಕೊಳ್ತಾರೆ ಎಂದು ವಿವರಿಸಿದರು.
ಈ ಬಗ್ಗೆ ನಮ್ಮ ಇಲಾಖೆಗೆ ಬಂದರೆ ಪರಿಶೀಲನೆ ಮಾಡ್ತೇವೆ. ಅದರ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತೇವೆ. ದೂರು ಬಂದರೆ ಮಾಡಬಹುದು. ವೈಯುಕ್ತಿಕವಾಗಿ ನನ್ನ ಅಭಿಪ್ರಾಯ ಯಾಕೆ ಹೇಳಬೇಕು? ಎಂದರು.
Advertisement