
ವಿಜಯಪುರ: ವಿಜಯಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಇಬ್ಬರು ಯುವಕರನ್ನು ಕ್ರೂರವಾಗಿ ಕೊಲೆ ಮಾಡಲಾಗಿದ್ದು, ಹಳೆ ವೈಷಮ್ಯದ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತರನ್ನು ಸಾಗರ್ ಬೆಲುಂಡಗಿ (25) ಮತ್ತು ಇಸಾಹಕ್ ಖುರೇಶಿ (24) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ ಅಪರಾಧ ಎಸಗಿದ ತಕ್ಷಣ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸಾಗರ್ ಮತ್ತು ಇಸಾಹಕ್ ಇಬ್ಬರೂ ಎರಡು ವರ್ಷಗಳ ಹಿಂದೆ ತಮ್ಮೂರ್ ಗ್ರಾಮದ ಈರನಗೌಡ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದರು. ಈ ವೈಷಮ್ಯಕ್ಕೆ ಇಬ್ಬರ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಹಲ್ಲೆ ಬಳಿಕ ಹಲವು ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಈರನಗೌಡ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದರು. ಈರನಗೌಡ ಅವರ ಸಾವಿಗೆ ಸೇಡು ತೀರಿಸಿಕೊಳ್ಳಳು ಇಬ್ಬರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ವಿಜಯಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.
Advertisement