KSRTC bus
ಕೆಎಸ್ ಆರ್ ಟಿಸಿ ಬಸ್ಸುಗಳು online desk

ದೀಪಾವಳಿ: 2,500 ಹೆಚ್ಚುವರಿ KSRTC ಬಸ್‌ ವ್ಯವಸ್ಥೆ

ಅ.17ರಿಂದ ನ.20ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.
Published on

ಬೆಂಗಳೂರು: ವಾರಾಂತ್ಯ ಮತ್ತು ದೀಪಾವಳಿ ಒಟ್ಟಿಗೆ ಬಂದಿವೆ. ಈ ಸಮಯದಲ್ಲಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ 2,500 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.

ಅ.17ರಿಂದ ನ.20ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಕೋಯಿಕ್ಕೋಡ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

KSRTC bus
ದೀಪಾವಳಿ ಕ್ಲೀನಿಂಗ್: ಹಳೆ ಸೆಟಪ್ ಬಾಕ್ಸ್ ನಲ್ಲಿದ್ದ 2 ಲಕ್ಷ ರೂ ಹಣ ಪತ್ತೆ; ಆದ್ರೆ RBI ಶಾಕ್...!

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ ಮಾಹಿತಿ ಗಮನಿಸುವಂತೆ ಕೋರಲಾಗಿದೆ.

www.ksrtc.karnataka.gov.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕ್ ಮಾಡಬಹುದು. 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5 ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com