ಕಲಬುರಗಿ: 3 ತಿಂಗಳಿಂದ ಸಿಗದ ವೇತನ; ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

ಡೆತ್ ನೋಟ್​​ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂದು ತಿಳಿಸಿದ್ದಾರೆ
library supervisor of Malkhed village in Sedam
ಗ್ರಂಥಾಲಯ ಮೇಲ್ವಿಚಾರಕಿ ಭಾಗ್ಯಶ್ರಿ
Updated on

ಕಲಬುರಗಿ: 3 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಪಾಂಡುಸಿಂಗ್ ಚವ್ಹಾಣ್ ಅವರ ಹೇಳಿಕೆಯ ಪ್ರಕಾರ, ‘ಮೂರು ತಿಂಗಳಿಂದ ವೇತನ ಪಾವತಿ ಆಗಿರಲಿಲ್ಲ.

ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾರೆ. ಡೆತ್ ನೋಟ್​​ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ” ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com