
ಬೆಂಗಳೂರು: ರಾಜಧಾನಿಯ ಗುಂಡಿಬಿದ್ದ, ಹದಗೆಟ್ಟ ರಸ್ತೆಗಳ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವಂತೆಯೇ ನಾಗರಿಕರ ಗುಂಪೊಂದು ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ಬೆದರಿಕೆ ಹಾಕಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್, ಸುಗಮ ಸಂಚಾರವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಿದ್ದು, ನಗರದ ವಿವಿಧೆಡೆ ರಸ್ತೆಗೆ ಡಾಂಬರೀಕರಣ ಹಾಗೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕಾಗಿ ಸಾಗಿದೆ ಎಂದು ತಿಳಿಸಿದ್ದಾರೆ.
ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್-ಶಾ ಅವರು ನಗರದ ರಸ್ತೆಗಳು ಮತ್ತು ತ್ಯಾಜ್ಯ ಕುರಿತು ವಿದೇಶದ ಕಾರ್ಯನಿರ್ವಾಹಕರ ಟೀಕೆಗಳನ್ನು ಇತ್ತೀಚಿಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ಇದಾದ ನಂತರ ಇದೀಗ ನಾಗರಿಕರು ತೆರಿಗೆ ಕಟ್ಟಲ್ಲ ಎಂಬಂತಹ ಮಾತುಗಳನ್ನಾಡುತ್ತಿದ್ದಾರೆ.
Advertisement