
ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಅಖ್ತರ್ ಬೇಗಂ ಮೃತಪಟ್ಟ ಮಹಿಳೆಯಾಗಿದ್ದಾರೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ.
ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.
ಎರಡು ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿ ಸುಳಿವು ಸಿಕ್ಕಿರಲಿಲ್ಲ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಜಾತಿ ಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಒತ್ತಡದ ಕಾರಣದಿಂದ ಮಾನಸಿಕವಾಗಿ ಸಮಸ್ಯೆ ಎದುರಿಸುತ್ತಿದ್ದರು ಎಂದು ಮೂಲಗಳು ಹೇಳಿವೆ. ಇದು ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕರಲ್ಲಿ ಸುರಕ್ಷತೆ ಬಗ್ಗೆ ಭೀತಿ ಉಂಟು ಮಾಡಿದೆ.
Advertisement