ಈ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಪಾಸ್: ಮಧು ಬಂಗಾರಪ್ಪ

625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
Madhu Bangarappa
ಸಚಿವ ಮಧು ಬಂಗಾರಪ್ಪ
Updated on

ಬೆಂಗಳೂರು: ಇನ್ನು ಮುಂದೆ SSLCಯಲ್ಲಿ ಶೇ. 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಉತ್ತೀರ್ಣ ಎಂದು ಘೋಷಿಸಲಾಗುವುದು. 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ.

ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ದೆವು. ಪರೀಕ್ಷೆಗಳು ಉತ್ತಮವಾಗಿ ನಡೆದವು.

ವೆಬ್ ಕ್ಯಾಸ್ಟಿಂಗ್‌ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನು ತಯಾರು ಮಾಡಿದರು.

Madhu Bangarappa
ಸಂಪುಟ ಪುನಾರಚನೆ ಸುಳಿವು: Farewell speech ನಂತೆ ಸಾಧನೆಗಳ ವಿವರಿಸಿದ ಸಚಿವ; ಮಧು ಬಂಗಾರಪ್ಪ ನಿರ್ಗಮನ?

ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದರು. ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. 33 ರಷ್ಟು ಉತ್ತೀರ್ಣದ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ರಷ್ಟು ಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com