ಬೆದರಿಕೆ ನಡುವೆ 'ಆರ್ ಎಸ್ ಎಸ್' ಕುರಿತು ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ! ಇದರಲ್ಲಿ ಏನಿದೆ?

ತೀವ್ರ ನಿಂದನೆ, ಬೈಗುಳ, ಬೆದರಿಕೆ ನಡುವೆಯೂ ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
Priyank Kharge
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ತಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ಬಿಜೆಪಿ ಸೇರಿದಂತೆ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಇದೀಗ ಸಿಎಂಗೆ ಮತ್ತೊಂದು ಪತ್ರ ಬರೆದಿದ್ದಾರೆ.

ತೀವ್ರ ನಿಂದನೆ, ಬೈಗುಳ, ಬೆದರಿಕೆ ನಡುವೆಯೂ ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಈ ಪತ್ರದಲ್ಲೇನಿದೆ? ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಮತ್ತೊಂದು ಪತ್ರದಲ್ಲಿ ಸರ್ಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ, ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ.

ಹೀಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

Priyank Kharge
Watch | ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ್ ಖರ್ಗೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com