ಬೆಂಗಳೂರು: ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಮೇಲೆ ರೇಪ್; ಮಧ್ಯ ಪ್ರವೇಶಿಸುವಂತೆ ಮಹಿಳಾ ಆಯೋಗಕ್ಕೆ ಅಶೋಕ್ ಪತ್ರ

ಘಟನೆಯ ನಂತರ, ಸಂತ್ರಸ್ತೆ ತನ್ನ ಇಬ್ಬರು ಸ್ನೇಹಿತರಿಗೆ ತಿಳಿಸಿದ್ದಾಳೆ. ನಂತರ ಜೀವನ್ ಗೌಡ ಆಕೆಗೆ ಕರೆ ಮಾಡಿ "ಮಾತ್ರೆ ಬೇಕೇ" ಎಂದು ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ದಕ್ಷಿಣ ಬೆಂಗಳೂರಿನಲ್ಲಿರುವ ಖಾಸಗಿ ಎಂಜಿನಿಯರಿಂಗ್ ಸಂಸ್ಥೆಯ ಆವರಣದಲ್ಲಿ ಪುರುಷರ ಶೌಚಾಲಯದಲ್ಲಿ ತನ್ನ ಕಾಲೇಜು ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

ಆರನೇ ಸೆಮಿಸ್ಟರ್ ವಿದ್ಯಾರ್ಥಿ ಜೀವನ್ ಗೌಡ ಬಂಧಿತ ಆರೋಪಿ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಅಕ್ಟೋಬರ್ 10 ರಂದು ನಡೆದಿದ್ದು, ಅದೇ ಕಾಲೇಜಿನಲ್ಲಿ ಏಳನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಸಂತ್ರಸ್ತೆ ಐದು ದಿನಗಳ ನಂತರ ಅಂದರೆ ಅಕ್ಟೋಬರ್ 15 ರಂದು ದೂರು ದಾಖಲಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿಗೆ ಪರಸ್ಪರ ಪರಿಚಯವಿತ್ತು. ಜೀವನ್ ಗೌಡ ಓದಿನಲ್ಲಿ ಹಿಂದುಳಿದಿದ್ದ ಎಂದು ವಿವರಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆ ಕೆಲವು ವಸ್ತುಗಳನ್ನು ಸಂಗ್ರಹಿಸಲು ಜೀವನ್ ಗೌಡನನ್ನು ಭೇಟಿಯಾಗಿದ್ದರು ಎಂದು ವರದಿಯಾಗಿದೆ.

ಊಟದ ವಿರಾಮದ ಸಮಯದಲ್ಲಿ, ಜೀವನ್ ಆಕೆಗೆ ಹಲವು ಬಾರಿ ಕರೆ ಮಾಡಿ, ಏಳನೇ ಮಹಡಿಯಲ್ಲಿರುವ ಆರ್ಕಿಟೆಕ್ಚರ್ ಬ್ಲಾಕ್ ಬಳಿ ತನ್ನನ್ನು ಭೇಟಿಯಾಗುವಂತೆ ಕೇಳಿದ ಎಂದು ಆರೋಪಿಸಲಾಗಿದೆ. ಆಕೆ ಬಂದಾಗ, ಆಕೆಯನ್ನು ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆಕೆ ಲಿಫ್ಟ್ ಬಳಸಿ ಹೊರಡಲು ಪ್ರಯತ್ನಿಸುತ್ತಿದ್ದಾಗ, ಆರನೇ ಮಹಡಿವರೆಗೂ ಆಕೆಯನ್ನು ಹಿಂಬಾಲಿಸಿದ ಜೀವನ್ ಗೌಡ, ಪುರುಷರ ಶೌಚಾಲಯಕ್ಕೆ ಎಳೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ಈ ವೇಳೆ ಜೀವನ್ ಗೌಡ ಶೌಚಾಲಯದ ಬಾಗಿಲನ್ನು ಲಾಕ್ ಮಾಡಿದ್ದಾನೆ. ಆಕೆಯ ಮೊಬೈಲ್ ಕರೆ ಬಂದಾಗ ಅದನ್ನು ವಶಪಡಿಸಿಕೊಂಡಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ. ಮಧ್ಯಾಹ್ನ 1:30 ರಿಂದ 1:50 ರ ನಡುವೆ ನಡೆದಿದೆ ಎನ್ನಲಾಗಿದೆ.

ಘಟನೆಯ ನಂತರ, ಸಂತ್ರಸ್ತೆ ತನ್ನ ಇಬ್ಬರು ಸ್ನೇಹಿತರಿಗೆ ತಿಳಿಸಿದ್ದಾಳೆ ಜೀವನ್ ಗೌಡ ಆಕೆಗೆ ಕರೆ ಮಾಡಿ "ಮಾತ್ರೆ ಬೇಕೇ" ಎಂದು ಕೇಳಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆ ಆರಂಭದಲ್ಲಿ ವಿದ್ಯಾರರ್ಥಿನಿ ಭಯಭೀತಳಾಗಿದ್ದರಿಂದ ದೂರು ನೀಡಲು ಹಿಂಜರಿದಳು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆಕೆ ತನ್ನ ಪೋಷಕರಿಗೆ ತಿಳಿಸಿದಳು, ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ಅಪರಾಧದ ದೃಶ್ಯ ಪುನರ್ನಿರ್ಮಾಣವನ್ನು ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ, ಇದು ಸಾಕ್ಷ್ಯ ಸಂಗ್ರಹಣೆಯನ್ನು ಸಂಕೀರ್ಣಗೊಳಿಸಬಹುದು. ಆದಾಗ್ಯೂ, ವಿಧಿವಿಜ್ಞಾನ ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಲಾಗುತ್ತಿದೆ.

ಪ್ರಕರಣ ಸಂಬಂಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಕೇವಲ ನಾಲ್ಕು ತಿಂಗಳಲ್ಲಿ ಹುಡುಗಿಯರ ಮೇಲೆ 979 ಲೈಂಗಿಕ ದೌರ್ಜನ್ಯಗಳು ನಡೆದಿವೆ.

ಬೆಂಗಳೂರಿನಲ್ಲಿ ಮಾತ್ರ 114 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ರಾಜ್ಯ ಸರ್ಕಾರದ ಕ್ರಿಮಿನಲ್ ನಿಷ್ಕ್ರಿಯತೆಯಿಂದಾಗಿ ನಮ್ಮ ಮಹಿಳೆಯರು ಮತ್ತು ಮಕ್ಕಳು ಭಯದಲ್ಲಿ ಬದುಕುತ್ತಿದ್ದಾರೆ. ಮೈಸೂರಿನಲ್ಲಿ ಬುಡಕಟ್ಟು ಹುಡುಗಿಯೊಬ್ಬಳ ಕ್ರೂರ ಅತ್ಯಾಚಾರ ಮತ್ತು ಕೊಲೆಯಿಂದ ಹಿಡಿದು ಕಲಬುರಗಿಯಲ್ಲಿ ಗ್ರಂಥಪಾಲಕಿಯ ದುರಂತ ಆತ್ಮಹತ್ಯೆಯವರೆಗೆ - ಇದು ನೈತಿಕ ಮತ್ತು ಆಡಳಿತಾತ್ಮಕ ವೈಫಲ್ಯ ಎಂದು ಹರಿಹಾಯ್ದಿದ್ದಾರೆ.

ಕರ್ನಾಟಕಕ್ಕೆ ಸತ್ಯಶೋಧನಾ ತಂಡವನ್ನು ಕಳುಹಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ತುರ್ತು ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದರು. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಅಸುರಕ್ಷಿತರಾಗಿರುವಾಗ ಬಿಜೆಪಿ ಮೌನವಾಗಿರುವುದಿಲ್ಲ. ಸರ್ಕಾರ ಇದಕ್ಕೆ ಉತ್ತರಿಸಬೇಕು ಮತ್ತು ನಮ್ಮ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಮತ್ತು ಭದ್ರತೆ ಖಚಿತಪಡಿಸಿಕೊಳ್ಳಲು ತ್ವರಿತವಾಗಿ ಕಾರ್ಯನಿರ್ವಹಿಸಬೇಕು" ಎಂದು ಅಶೋಕ ಹೇಳಿದರು.

Representational image
ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com