
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಡಿ ಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಕೂಗು, ಒತ್ತಾಯ ಅವರ ಅಭಿಮಾನಿಗಳಿಂದ ಕೇಳಿಬರುತ್ತಲೇ ಇದೆ. ನವೆಂಬರ್ ನಲ್ಲಿ ಕ್ರಾಂತಿಯಾಗುತ್ತದೆ ಎಂದು ಈ ಹಿಂದೆ ಕಾಂಗ್ರೆಸ್ ನಾಯಕರೇ ಹೇಳಿಕೆ ನೀಡಿದ್ದರು. ಆದರೆ ಸ್ವತಃ ಸಿಎಂ ಸಿದ್ದರಾಮಯ್ಯನವರ ಅದನ್ನು ನಿರಾಕರಿಸಿದ್ದಾರೆ.
ಈ ಮಧ್ಯೆ ಡಿ ಕೆ ಶಿವಕುಮಾರ್ ಅಭಿಮಾನಿಯಾದ ಬೆಂಗಳೂರು ದಕ್ಷಿಣ ಜಿಲ್ಲೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಿಜ್ವಾನ್ ಪಾಷಾ ಮೆಕ್ಕಾಕ್ಕೆ ಹೋದ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಸೋದರರ ಫೋಟೋವನ್ನು ಮೊಬೈಲ್ ನಲ್ಲಿ ಹಿಡಿದುಕೊಂಡು ಪ್ರಾರ್ಥಿಸಿಕೊಂಡಿದ್ದಾರೆ.
ವಿಡಿಯೊದಲ್ಲಿ ಏನು ಹೇಳಿದ್ದಾರೆ?
ನಾನು ಕರ್ನಾಟಕದ ಮೆಕ್ಕಾಗೆ ಬಂದಿದ್ದೇನೆ. ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಇಬ್ಬರೂ ನನ್ನ ಕಣ್ಣುಗಳು ಇದ್ದ ಹಾಗೆ. ಡಿ ಕೆ ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥನೆ ಮಾಡಲು ಮೆಕ್ಕಾಗೆ ಬಂದಿದ್ದೇನೆ. ಇಲ್ಲಿಗೆ ಬಂದು ಹರಕೆ ಹೊತ್ತರೆ ಅಲ್ಲಾ ಕಾಪಾಡುತ್ತಾನೆ ಎಂಬುದು ಕೇವಲ ಮುಸಲ್ಮಾನರು ಮಾತ್ರವಲ್ಲ ಜಗತ್ತಿನ ಜನರ ನಂಬಿಕೆಯಾಗಿದೆ.
ಮುಂದಿನ ದಿನಗಳಲ್ಲಿ ಡಿ ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ನಾನು ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿಯವರಲ್ಲಿ ಮನವಿ ಮಾಡುತ್ತೇನೆ. ಜೈ ಹಿಂದ್ ಜೈ ಕರ್ನಾಟಕ, ಜೈ ಹಿಂದೂಸ್ತಾನ್ ಎಂದು ರಿಜ್ವಾನ್ ಹೇಳಿದ್ದಾರೆ.
Advertisement