ಮಂಗಳೂರು: 'ಹನಿಟ್ರ್ಯಾಪ್ ಕಿರುಕುಳ'ಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣು!

ಮೃತ ಯುವಕನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.
Mangaluru youth dies by suicide after 'honeytrap harassment'
ಅಭಿಷೇಕ್
Updated on

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕನೊಬ್ಬ, ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತ ಯುವಕನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.

ಡೆತ್ ನೋಟ್ ನಲ್ಲಿ ತಾನು ಪ್ರೀತಿಸಿದ ಹುಡುಗಿ ನಿರೀಕ್ಷಾ, ಆಕೆ ತಂಡದಲ್ಲಿದ್ದ ಮಂಗಳೂರು ಮೂಲದ ರಾಕೇಶ್ ,ರಾಹುಲ್ ಹಾಗೂ ತಸ್ಲೀಮ್ ಸಾವಿಗೆ ಕಾರಣ ಎಂದು ಬರೆದಿದ್ದಾನೆ. ಅವರು ಹಣಕ್ಕಾಗಿ ತೀವ್ರ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಅಲ್ಲದೆ ಇವರು ತಂಡವಾಗಿ ಅನೇಕ ಜನರನ್ನು ಅಶ್ಲೀಲ ಫೋಟೋ ಬಳಸಿ ವಂಚಿಸಿದ್ದಾರೆ ಅಂತಲೂ ದೂರಿದ್ದಾನೆ.

Mangaluru youth dies by suicide after 'honeytrap harassment'
ಚಾಮರಾಜನಗರ: ವೇತನ ಸಿಗದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; PDO ಅಮಾನತು..!

ಡೆತ್ ನೋಟ್‌ನ ವಿಷಯಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಯುವಕ, ನಿರಂತರ ಬೆದರಿಕೆ ಮತ್ತು ಸುಲಿಗೆ ಪ್ರಯತ್ನಗಳಿಂದ ಬಳಲುತ್ತಿದ್ದರು ಎಂದು ಸೂಚಿಸುತ್ತವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com