RSS ನಿಷೇಧ: ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ರಾ? ಕುತೂಹಲ ಕೆರಳಿಸಿದ ಪ್ರಿಯಾಂಕ್ ಖರ್ಗೆ ಟ್ವೀಟ್!

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?
Priyank Kharge, HD Devegowda
ಪ್ರಿಯಾಂಕ್ ಖರ್ಗೆ, ಎಚ್. ಡಿ. ದೇವೇಗೌಡರು ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ '' ಆರ್ ಎಸ್ ಎಸ್ ನಿಷೇಧವಾಗಬೇಕು'' ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತ ಪತ್ರಿಕಾ ವರದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಆರ್ ಎಸ್ ಎಸ್, ವಿಹೆಚ್ ಪಿ, ಬಜರಂಗದಳ ಮತ್ತು ಶಿವಸೇನೆಯಂಥ ಕೋಮು ಸಂಘಟನೆಗಳನ್ನು ನಿಷೇಧಿಸಬೇಕು. ದಕ್ಷಿಣ ಗುಜರಾತ್ ನಲ್ಲಿ ಕ್ರೈಸ್ತರ ಮೇಲೆ ನಡೆದ ದಾಳಿಗೆ ಈ ಸಂಘಟನೆಗಳು ಕಾರಣ ಎಂದು ದೇವೇಗೌಡರು ಆರೋಪಿಸಿರುವುದು ವರದಿಯಲ್ಲಿದೆ.

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಈ ಹಳೆಯ ಪಾಳೆಯುಳಿಕೆಯಂತಹ ಮಾತುಗಳನ್ನು ಈ ಸಂದರ್ಭದಲ್ಲಿ ಬಿಜೆಪಿಯವರಿಗೆ ನೆನಪು ಮಾಡಲು ಬಯಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Priyank Kharge, HD Devegowda
ಟಾರ್ಗೆಟ್ RSS ಅಲ್ಲವೇ ಅಲ್ಲ, ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ: ಸಿದ್ದರಾಮಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com