
ಬೆಳಗಾವಿ: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆಡಿಯೋ ವೈರಲ್ ಆದ ಬೆನ್ನಲ್ಲೇ ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ಮುಖಂಡ ರಾಜಶೇಖರ ತಳವಾರ ದೂರು ನೀಡಿದ್ದರು.
ಇನ್ನು ರಮೇಶ್ ಕತ್ತಿ ವಿರುದ್ಧ ನಾಳೆ ರಾಜ್ಯಾದ್ಯಂತ ಹೋರಾಟಕ್ಕೆ ವಾಲ್ಮೀಕಿ ಸಮಾಜ ಕರೆ ನೀಡಿದ್ದು ಇದರ ಬೆನ್ನಲ್ಲೇ ರಮೇಶ್ ಕತ್ತಿ ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ವಿರೋಧಿಗಳು ನನ್ನ ಹೇಳಿಕೆಯನ್ನ ತಿರುಚಿದ್ದಾರೆ. ಯಾರಿಗಯಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕತ್ತಿ ಹೇಳಿದ್ದಾರೆ.
Advertisement