ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾ.ಪಂ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಸ್ವತ್ತು ಸೌಲಭ್ಯ..!

ರಾಜ್ಯ ಸರ್ಕಾರದ ಈ ಕ್ರಮವು ಗ್ರಾಮೀಣ ಜನರಿಗೆ ಆಸ್ತಿ ಸಂಬಂಧಿತ ದಾಖಲೆಗಳನ್ನು ಪಾರದರ್ಶಕವಾಗಿ, ವೈಜ್ಞಾನಿಕವಾಗಿ ಮತ್ತು ತ್ವರಿತವಾಗಿ ಪಡೆಯಲು ಅನುವು ಮಾಡಿಕೊಡಲಿದೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಗ್ರಾಮೀಣ ಜನತೆಯ ಜೀವನವನ್ನು ಸರಳಗೊಳಿಸುವ ಮತ್ತು ಗ್ರಾಮ ಪಂಚಾಯಿತಿಗಳ ಆಡಳಿತವನ್ನು ಆಧುನಿಕಗೊಳಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವೊಂದನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದ್ದು, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ವಿತರಣೆಯನ್ನು ಪ್ರಾರಂಭಿಸಿದೆ.

ರಾಜ್ಯ ಸರ್ಕಾರದ ಈ ಕ್ರಮವು ಗ್ರಾಮೀಣ ಜನರಿಗೆ ಆಸ್ತಿ ಸಂಬಂಧಿತ ದಾಖಲೆಗಳನ್ನು ಪಾರದರ್ಶಕವಾಗಿ, ವೈಜ್ಞಾನಿಕವಾಗಿ ಮತ್ತು ತ್ವರಿತವಾಗಿ ಪಡೆಯಲು ಅನುವು ಮಾಡಿಕೊಡಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಯೋಜನೆಗೆ ಶನಿವಾರ ಚಾಲನೆ ನೀಡಿದ್ದಾರೆ.

ಇದಕ್ಕಾಗಿ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ–1993ಕ್ಕೆ ತಿದ್ದುಪಡಿ ತರಲಾಗಿದೆ. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ, ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

File photo
ಹಾಸನಾಂಭ ಉತ್ಸವದಲ್ಲಿ VIP ಸಂಸ್ಕೃತಿಗೆ ಬ್ರೇಕ್; ಜನಸ್ನೇಹಿ ಉತ್ಸವಕ್ಕೆ ಅವಕಾಶ: ಕೃಷ್ಣ ಬೈರೇಗೌಡ

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧರಣೆ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ(ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇ - ಸ್ವತ್ತು ಯೋಜನೆಯು ಗ್ರಾಮ ಪಂಚಾಯಿತಿಗಳನ್ನು ಬಲವರ್ಧನೆ ಮಾಡುವುದರ ಜೊತೆಗೆ ಗ್ರಾಮೀಣ ಜನರ ಆಸ್ತಿಗಳಿಗೆ ಭದ್ರತೆಯನ್ನೂ ಒದಗಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com