
ಬೆಂಗಳೂರು: ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶನಿವಾರ ಹೇಳಿದ್ದಾರೆ.
ಸರ್ಕಾರಿ ಜಾಗದಲ್ಲಿ ಆರ್'ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಬೇಕು ಎಂದು ಅರ್ಜಿ ಸಲ್ಲಿಸಿ ಅದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಖರ್ಗೆಯವರು ಯಶಸ್ಸು ಕಂಡಿದ್ದಾರೆ. ಇದರ ಬೆನ್ನಲ್ಲೇ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದ, ಈ ಬಗ್ಗೆ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಎಸ್ಎಸ್ ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ. ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ ಎಂದು ಹೇಳಿದ್ದಾರೆ.
ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆದರೆ ಆರ್ಎಸ್ಎಸ್ ತಮ್ಮದು ಧಾರ್ಮಿಕ ಸಂಘಟನೆಯಲ್ಲ ಎನ್ನುತ್ತದೆ, ಧರ್ಮದ ಹೆಸರಲ್ಲಿ ಅವಾಂತರ ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.
Advertisement