'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ!

ಓಲಾ ಸಂಸ್ಥೆಯ ಹೋಮೋಲೋಗೇಷನ್ ವಿಭಾಗದ ಅರವಿಂದ್ ಕೆ(38) ಅವರು ಬೆಂಗಳೂರಿನ ಚಿಕ್ಕಲಸಂದ್ರದಲ್ಲಿರುವ ಮಂಜುನಾಥನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೆ.28 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Bengaluru Ola Engineer Dies By Suicide
ಭವೀಶ್ ಅಗರ್ವಾಲ್ ವಿರುದ್ಧ ಪ್ರಕರಣ
Updated on

ಬೆಂಗಳೂರು: ದೇಶದ ಪ್ರತಿಷ್ಠಿತ ಓಲಾ ಕಂಪನಿಗೆ ಸಂಕಷ್ಟ ಎದುರಾಗಿದ್ದು, ಸಂಸ್ಥೆಯ ಎಂಜಿನಿಯರ್ ಒಬ್ಬರು 'ಸಂಬಳ ನೀಡದೇ ಕಿರುಕುಳ' ನೀಡಲಾಗುತ್ತಿದೆ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಓಲಾ ಸಂಸ್ಥೆಯ ಹೋಮೋಲೋಗೇಷನ್ ವಿಭಾಗದ ಅರವಿಂದ್ ಕೆ(38) ಅವರು ಬೆಂಗಳೂರಿನ ಚಿಕ್ಕಲಸಂದ್ರದಲ್ಲಿರುವ ಮಂಜುನಾಥನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೆ.28 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಅರವಿಂದ್ ಸಾವಿಗೆ ಸಂಸ್ಥೆಯ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಎರಡು ದಿನದ ಬಳಿಕ ಅರವಿಂದ್ ಬ್ಯಾಂಕ್ ಅಕೌಂಟ್ ಗೆ 17.46 ಲಕ್ಷ ರೂ. ಹಣ ಜಮೆಯಾಗಿತ್ತು. ಹಣ ಜಮೆಯಾದ ಬಗ್ಗೆ ಅನುಮಾನದಿಂದ ಕಂಪನಿಯವರನ್ನ ಕುಟುಂಬಸ್ಥರು ಪ್ರಶ್ನಿಸಿದ್ದರು. ಆದರೆ ಕಂಪನಿಯಿಂದ ಸರಿಯಾದ ಸ್ಪಷ್ಟನೆ ಸಿಕ್ಕಿರಲಿಲ್ಲ. ಹೀಗಾಗಿ ಅನುಮಾನ ಹೆಚ್ಚಾದ ನಂತರ ಮನೆಯನ್ನು ಪರಿಶೀಲಿಸಿದಾಗ 28 ಪುಟಗಳ ಡೆತ್ ನೋಟ್ ಪತ್ತೆಯಾಗಿತ್ತು.

Bengaluru Ola Engineer Dies By Suicide
ಬೆಂಗಳೂರು: ದೀಪಾವಳಿ ಹಬ್ಬದ ದಿನವೇ ಜಿಟಿ ಮಾಲ್ ನಿಂದ ಬಿದ್ದು ಯುವಕ ಆತ್ಮಹತ್ಯೆ!

ಸಂಬಳ ನೀಡದೇ ಕಿರುಕುಳ

ಅರವಿಂದ್ ಡೆತ್ ನೋಟ್ ನಲ್ಲಿ ಸಂಸ್ಥೆಯಲ್ಲಿನ ಕಿರುಕುಳದ ಕುರಿತು ಆರೋಪಿಸಿದ್ದಾರೆ ಎನ್ನಲಾಗಿದೆ. ಡೆತ್ ನೋಟ್‌ನಲ್ಲಿ ಕಂಪನಿಯ ಹೆಡ್ ಆಫ್ ಹೋಮೋರೋಗೇಷನ್ ಎಂಜಿನಿಯರ್ ಸಂಬ್ರತ್ ಕುಮಾರ್ ದಾಸ್ ಮತ್ತು ಕಂಪನಿ ಮಾಲೀಕ ಬಾವೀಶ್ ಅಗರ್‌ವಾಲ್‌ ಕೆಲಸದಲ್ಲಿ ಒತ್ತಡ ನೀಡುತ್ತಿದ್ದಾರೆ.

ಅಷ್ಟೇ ಅಲ್ಲದೇ ತನಗೆ ನೀಡಬೇಕಾಗಿರುವ ವೇತನ ಮತ್ತು ಇತರೆ ಭತ್ಯೆ ನೀಡದೇ ಕಿರುಕುಳ ನೀಡುತ್ತಿದ್ದರಿಂದ ತಾನು ಬೇಸತ್ತು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅರವಿಂದ್ ಉಲ್ಲೇಖಿಸಿದ್ದಾರೆ. ಹೀಗಾಗಿ ತನ್ನ ತಮ್ಮನ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅರವಿಂದ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಓಲಾ ಮುಖ್ಯಸ್ಥರ ವಿರುದ್ಧವೂ ಪ್ರಕರಣ

ಡೆತ್‌ ನೋಟ್‌ ಆಧಾರದ ಮೇಲೆ ಅರವಿಂದ್ ಅವರ ಸಹೋದರ ಅಶ್ವಿನ್‌ ಅವರು ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿ ಸುಬ್ರತ್ ಕುಮಾರ್ ದಾಸ್(ಎ1),ಭವೀಶ್ ಅಗರ್ವಾಲ್ (ಎ2),ಓಲಾ ಎಲೆಕ್ಟ್ರಿಕ್ ಕಂಪನಿ(ಎ3) ಆರೋಪಿಗಳನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com